ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ
Update: 2024-12-23 14:10 GMT
ಮಂಗಳೂರು: ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆಯ 2024ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ಪೋಸ್ಟರ್ ಹಾಗೂ ಬ್ಯಾನರನ್ನು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉರ್ವಸ್ಟೋರ್ ಜಿಪಂನಲ್ಲಿರುವ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ದ.ಕ. ಜಿಲ್ಲಾ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅನಾವರಣಗೊಳಿಸಿದರು.
ಈ ಸಂದರ್ಭ ಶಾಸಕರಾದ ಅಶೋಕ್ ಕುಮಾರ್ ರೈ, ಐವನ್ ಡಿಸೋಜ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜಿಪಣ ಸಿಇಒ ಡಾ.ಆನಂದ್ ಕೆ., ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಪೊಲೀಸ್ ವರಿಷ್ಠಾಧಿಕಾರಿ ಯತೀಶ್‌ಎನ್,ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜ, ಜಿಲ್ಲಾ ಉದ್ಯೋಗಾಧಿಕಾರಿ ವೈ.ಎಂ.ಬಡಿಗೇರ ಉಪಸ್ಥಿತರಿದ್ದರು.