ಎರಡು ತಂಡಗಳ ನಡುವೆ ಗಲಾಟೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2024-12-23 16:09 GMT

ಬಂಟ್ವಾಳ : ಬಿ.ಸಿ.ರೋಡಿನ ಕೈಕಂಬ ಪರ್ಲಿಯಾದಲ್ಲಿ ಬಾಡಿಗೆ ಕೊಡುವ ವಿಚಾರದಲ್ಲಿ ಎರಡು ತಂಡಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸರು ಎರಡೂ ತಂಡಗಳ ತಲಾ ಒಬ್ಬೊಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಗಲಾಟೆಗೆ ಸಂಬಂಧಿಸಿ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ಹಾಗೂ ಪ್ರತಿದೂರು ನೀಡಿದ್ದು ಎರಡೂ ಕಡೆಯ ಪ್ರಕರಣ ದಾಖಲಾಗಿತ್ತು.

ಪರ್ಲಿಯಾ ಮದ್ದ ಮನೆ ನಿವಾಸಿ ಶಾಹುಲ್ ಹಮೀದ್ ಹಾಗೂ ತಾರಿಪಡ್ಪು ನಿವಾಸಿ ಹಸೈನಾರ್ ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮನೆಯ ಅಂಗಳದಲ್ಲಿ ಎರಡು ತಂಡಗಳ ನಡುವೆ ಗಲಾಟೆಯ ವಿಡಿಯೋ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News