ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2024-12-27 16:11 GMT

ಮಂಗಳೂರು: ಪ್ರಸಕ್ತ (2024-25ನೇ) ಸಾಲಿಗೆ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ 25000 ರೂ.ಗಳ ವಿಶೇಷ ಪ್ರೋತ್ಸಾಹಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ.

National Council for Teacher Educationನಿಂದ ಮಾನ್ಯತೆ ಪಡೆದಿರುವ ಸರಕಾರಿ/ಅರೆ ಸರಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾ ಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಈಆ ಮೂಲಕ ಹಣ ಜಮೆ ಮಾಡಲಾಗುವುದು.

ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhuservices.karnataka.gov.in) ಮೂಲಕ ಸಲ್ಲಿಸಲಾಗುವ ಅರ್ಜಿಯ ಅವಧಿಯನ್ನು 2025ರ ಜ.6ರೊಳಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https://dom.karnataka.gov.in/ಸಹಾಯವಾಣಿ:8277799990ನ್ನು ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News