ಪೋರ್ಜರಿ ದಾಖಲೆ ಸೃಷ್ಟಿಸಿ ವಂಚನೆ ಪ್ರಕರಣ: ಆರೋಪಿ ಸೆರೆ
Update: 2025-01-02 16:29 GMT
ಮಂಗಳೂರು: ನಕಲಿ ಆಧಾರ್ ಕಾರ್ಡ್ ಗಳನ್ನು ಬಳಸಿ ಪೊರ್ಜರಿ ದಾಖಲಾತಿಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ವಿಚಾರಣೆ ಯಲ್ಲಿರುವ ಪ್ರಕರಣಗಳ ಆರೋಪಿಗಳಿಗೆ ಶ್ಯೂರಿಟಿದಾರನಾಗಿ ನಿಂತು ವಂಚನೆ ಮಾಡಿದ ಪ್ರಕರಣದ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಪು ಕಳತ್ತೂರಿನ ಕೆ. ಉಮ್ಮರಬ್ಬ ಮ್ಯೊದೀನ್(63) ಬಂಧಿತ ಆರೋಪಿ.
ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ನೇತೃತ್ಬದಲ್ಲಿ ಠಾಣಾ ಪಿ ಎಸ್ ಐ ಹಾಗೂ ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.