ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪ್ರಭಾಕರ ಶಿಶಿಲ ಆಯ್ಕೆ

Update: 2025-01-06 16:34 GMT

ಮಂಗಳೂರು, ಜ.6: ಮಂಗಳುರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಫೆಬ್ರವರಿ 21 ಮತ್ತು 22 ರಂದು ನಡೆಯುವ 27ನೇ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹಿರಿಯ ಸಾಹಿತಿ ಡಾ. ಪ್ರಭಾಕರ ಶಿಶಿಲ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ದ.ಕ. ಜಿಲ್ಲಾ ಕನ್ನಡ ಸಾತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ ತಿಳಿಸಿದ್ದಾರೆ.

ಸುಳ್ಯ ತಾಲೂಕಿನ ಕೂತುಕುಂಜ ಕಜೆ ಎಂಬಲ್ಲಿ ಹುಟ್ಟಿ ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಬೆಳೆದು, ಸುಳ್ಯದಲ್ಲಿ ನೆಲೆಸಿರುವ ಡಾ. ಪ್ರಭಾಕರ ಶಿಶಿಲರು ಕನ್ನಡದ ವಿಶಿಷ್ಟ ಪ್ರತಿಭೆ ಹಾಗೂ ಶ್ರೇಷ್ಠ ಸಾಹಿತಿಯಾಗಿದ್ದಾರೆ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ 5 ಪ್ರವಾಸ ಕಥನ ಸಹಿತ 54 ಸೃಜನಶೀಲ ಕೃತಿಗಳನ್ನು ಹಾಗೂ 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳನ್ನು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳ ರಚಿಸಿದ್ದಾರೆ. ಕನ್ನಡ ದಿನ ಪತ್ರಿಕೆಗಳು ಹಾಗೂ ನಿಯತಾಕಾಲಿಕಗಳಲ್ಲಿ 250ಕ್ಕೂ ಅಧಿಕ ಲೇಖನ, ಕತೆ, ವಿಡಂಬನೆ ಇತ್ಯಾದಿಗಳು ಪ್ರಕಟಗೊಂಡಿವೆ.

ಇವರು ಬರೆದ ಪುಂಸ್ತ್ರೀ ಕೃತಿ ಸಂಸ್ಕೃತ, ಹಿಂದಿ, ಮಲೆಯಾಳಂ, ತೆಲುಗು, ತುಳು, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಕೊಡವ, ಗುಜರಾಥಿ, ಬೆಂಗಾಲಿ, ಪಂಜಾಬಿ, ಇಂಗ್ಲೀಷ್ ಭಾಷೆಗಳಿಗೆ ಅನುವಾದಗೊಂಡಿವೆ. ಮತ್ಸ್ಯಗಂಧಿ, ಕಪಿಲಳ್ಳಿಯ ಕತೆಗಳು, ಮೂಡಣದ ಕೆಂಪುಕಿರಣ, ಇರುವುದೆಲ್ಲವ ಬಿಟ್ಟು ಕೃತಿಗಳೂ ಇತರ ಭಾಷೆಗೆ ಅನುವಾದಗೊಂಡಿವೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News