ಉನ್ನತ ಶಿಕ್ಷಣದಲ್ಲಿ ಸಂಶೋಧನೆಯ ಪಾತ್ರ ಮಹತ್ವದ್ದು: ಪ್ರೊ.ಪಿ.ಎಲ್.ಧರ್ಮ
ಕೊಣಾಜೆ: ಇಂದಿನ ಆಧುನಿಕತೆಯಲ್ಲಿ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಅವಕಾಶಗಳಿವೆ. ಹಾಗೆಯೇ ಉನ್ನತ ಶಿಕ್ಷಣದಲ್ಲಿ ಸಂಶೋಧನೆಯ ಪಾತ್ರವೂ ಮಹತ್ತರವಾದದ್ದು ಮತ್ತು ಸಂಶೋದನೆಯಿಂದ ನಮ್ಮ ಜ್ಞಾನವೂ ವಿಸ್ತರಿಸುತ್ತದೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಬಳಸಿಕೊಂಡು ಮುನ್ನಡೆಯಬೇಕು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಅವರು ಹೇಳಿದರು.
ಅವರು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಐಸಿಎಸ್ ಎಸ್ ಆರ್ ಪ್ರಾಯೋಜಕತ್ವದಲ್ಲಿ ಸಂಶೋಧಕರಿಗೆ ಹಾಗೂ ಬೋಧಕರಿಗೆ ಎರಡು ದಿನಗಳ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.
ಇಂತಹ ಕಾರ್ಯಾಗಾರಗಳಲ್ಲಿ ಹೆಚ್ಚೆಚ್ಚು ತೊಡಗಿಸಿಕೊಂಡು ಉನ್ನತ ಶಿಕ್ಷಣದ ಕ್ಷೇತ್ರದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ವಿವಿಯ ಪ್ರಾಧ್ಯಾಪಕ ಪ್ರೊ.ಕೆ.ಬಿ.ರಂಗಪ್ಪ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮದಿಂದ ಸಂಶೋಧಕರು ಹಾಗೂ ಬೋಧಕರಲ್ಲಿ ಹೊಸ ಚೈತನ್ಯ ದೊಂದಿಗೆ ಸಮಾಜಮುಖಿಯನ್ನಾಗಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ಅಧ್ಯಕ್ಷರಾದ ಡಾ.ಪ್ರೀತಿ ಕೀರ್ತಿ ಡಿಸೋಜ, ಪ್ರಾಧ್ಯಾಪಕರಾದ ಪ್ರೊ.ಮುನಿರಾಜು, ಪ್ರೊ.ವೇದವ, ಪ್ರೊ.ಪರಮೇಶ್ವರ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಾಗಾರದ ನಿರ್ದೇಶಕರಾದ ಪ್ರೊ.ಈಶ್ವರ ಪಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಾಗಾರದ ಮಹತ್ವವನ್ನು ವಿವರಿಸಿದರು.