ಮಂಗಳೂರು: ಕರ್ನಾಟಕ ಪಾಲಿಟೆಕ್ನಿಕ್‌ನ ವಿದ್ಯಾರ್ಥಿನಿಲಯ ಉದ್ಘಾಟನೆ
ಮಂಗಳೂರು, ಜ.7: ನಗರದ ಕರ್ನಾಟಕ ಪಾಲಿಟೆಕ್ನಿಕ್‌ನ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಗುಂಡಳಿಕೆಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹಾಸ್ಟೆಲ್ ಕಟ್ಟಡವನ್ನು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಮಂಗಳವಾರ ಉದ್ಘಾಟಿಸಿದರು.
24 ಕೊಠಡಿಗಳಿರುವ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ 100 ಮಂದಿ ವಿದ್ಯಾರ್ಥಿಗಳಿಗೆ ವಸತಿಗೆ ಅವಕಾಶ ಇರುತ್ತದೆ.
ಕರ್ನಾಟಕ ಪಾಲಿಟೆಕ್ನಿಕ್‌ನ ಅಮೃತ ಮಹೋತ್ಸವ ಸವಿನೆನಪಿಗಾಗಿ ಹಳೆ ವಿದ್ಯಾರ್ಥಿಗಳು ನಿರ್ಮಿಸಿಕೊಡಲಿರುವ 3 ಕೋಟಿ ರೂ. ವೆಚ್ಚದ ಅಮೃತ ಮಹೋತ್ಸವ ಭವನಕ್ಕೆ ಇದೇ ಸಂದರ್ಭದಲ್ಲಿ ಸಚಿವ ಎಂ.ಸಿ. ಸುಧಾಕರ ಶಿಲಾನ್ಯಾಸ ನೆರವೇರಿಸಿದರು.
ಕರ್ನಾಟಕ ಪಾಲಿಟೆಕ್ನಿಕ್ ಶೈಕ್ಷಣಿಕ ಸ್ವಾಯತ್ತತೆ ಪಡೆದ ದೇಶದ ಮೊದಲ ಸರಕಾರಿ ಪಾಲಿಟೆಕ್ನಿಕ್ ಎಂದು ಸಚಿವರು ಈ ಸಂದರ್ಭದಲ್ಲಿ ಘೋಷಿಸಿದರು. ಬೆಳಗ್ಗೆ ಮಂಗಳಾ ಕ್ರೀಡಾಂಗಣದಲ್ಲಿ 45ನೇ ರಾಜ್ಯ ಮಟ್ಟದ ಅಂತರ್ ಪಾಲಿಟೆಕ್ನಿಕ್ ಕ್ರೀಡಾಕೂಟಕ್ಕೆ ಸಚಿವ ಸುಧಾಕರ್ ಚಾಲನೆ ನೀಡಿದ್ದರು. ಕ್ರೀಡಾಕೂಟದ ಸಮಾರೋಪ ಸಮಾರಂಭ ಬುಧವಾರ ಸಂಜೆ ನಡೆಯಲಿದೆ.