ಎಸೆಸೆಲ್ಸಿ ಜೀವನದ ಟರ್ನಿಂಗ್ ಪಾಯಿಂಟ್‌: ಸ್ಪೀಕರ್ ಯು.ಟಿ.ಖಾದರ್

Update: 2025-01-08 12:52 GMT

ಕೊಣಾಜೆ: ಶಿಕ್ಷಣವು ಪ್ರತಿಯೊಬ್ಬರ ಬದುಕಿನಲ್ಲೂ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಅದರಲ್ಲಿಯೂ ಎಸೆಸೆಲ್ಸಿ ಜೀವನದ ಟರ್ನಿಂಗ್ ಪಾಯಿಂಟ್. ಜೀವನದ ಪಥವನ್ಜು ನಿರ್ಧರಿಸುವ ಕಾಲಘಟ್ಟವಾಗಿದೆ. ಆದ್ದರಿಂದ ಆತ್ಮವಿಶ್ವಾಸ ದೊಂದಿಗೆ ಎಸೆಸೆಲ್ಸಿ ಪರೀಕ್ಷೆ ಎದುರಿಸಿ ಉತ್ತಮ ಅಂಕಪಡೆದು ಉದ್ದೇಶಿತ ಗುರಿಯೊಂದಿಗೆ ಮುನ್ನಡೆಯಿರಿ ಎಂದು ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು.

ಅವರು ದೇರಳಕಟ್ಟೆಯಲ್ಲಿ ಜಮೀಯ್ಯತುಲ್ ಫಲಾಹ್ ಉಳ್ಳಾಲ ತಾಲೂಕು ಘಟಕ ಹಾಗೂ ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ , ಜನ ಶಿಕ್ಷಣ ಟ್ರಸ್ಟ್ ಮುಡಿಪು ಇದರ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯ ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಾಗಾರ 'ಚೈತನ್ಯ ಚಿಲುಮೆ-2025' ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜೀವನದಲ್ಲಿ ಉತ್ತಮ ವ್ಯಕ್ತಿಯಾಗಿ ರೂಪುಗೊಳ್ಳುವುದರೊಂದಿಗೆ ಶಿಕ್ಷಕರು ಹಾಗೂ ತಂದೆ ತಾಯಿಯಂದಿರ ಕನಸನ್ನೂ ನನಸಾಗಿಬೇಕು. ಇಂತಹ ಕಾರ್ಯಾಗಾರದ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಜಮೀಯ್ಯತುಲ್ ಫಲಾಹ್ ಜಿಲ್ಲಾಧಕ್ಷರಾದ ಶಾಹುಲ್ ಹಮೀದ್ ಕೆ ಕೆ ಅವರು ಮಾತನಾಡಿ, ಎಸೆಸೆಲ್ಸಿ ಶೈಕ್ಷಣಿಕವಾಗಿ ಜೀವನದ ಮಹತ್ವದ ಘಟ್ಟವಾಗಿದೆ. ಪರೀಕ್ಷೆಗೆ ಉತ್ತಮ ತಯಾರಿಯೊಂದಿಗೆ ಪರೀಕ್ಷೆ ಎದುರಿಸುವುದು ಹೇಗೆ, ವಿದ್ಯಾರ್ಥಿ ಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಕುರಿತು ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ ಈ ನಿಟ್ಟಿನಲ್ಲಿ ಜಮಿಯತ್ತುಲ್ ಫಲಾಹ ಸಂಸ್ಥೆಯು ವಿದ್ಯಾರ್ಥಿಗಳಿಗೆ ತರಬೇತಿ ಸೇರಿದಂತೆ ಅನೇಕ ಸಮಾಜಮುಖಿ ಚಟುವಟಿಕೆ ಗಳನ್ನು ಹಮ್ಮಿಕೊಂಡು ಮುನ್ನಡೆಯುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಈಶ್ವರ್, ಉದ್ಯಮಿ ಶಿಯಾಬ್ ಖಲಂದರ್, ಮಾಜಿ ಒಂಬ್ಯುಡ್ಸ್ ಮೆನ್ ಶೀನ ಶೆಟ್ಟಿ, ಜಮೀಯತ್ತಯಲ್ ಫಲಾಹ್ ಪ್ರಧಾನ ಕಾರ್ಯದರ್ಶಿ ಹಾಜಿ ಇಬ್ರಾಹಿಂ ಕೋಡಿಜಾಲ್,‌ ಜನಶಿಕ್ಷಣ ಟ್ರಸ್ಟ್ ನ ಕೃಷ್ಣ ಮೂಲ್ಯ, ಕೊಣಾಜೆ ಗ್ರಾಮೀಣ ಯುವಕ ಸಂಘದ ಅಧ್ಯಕ್ಷರಾದ ಎ.ಕೆ.ಅಬ್ದುಲ್ ರಹಿಮಾನ್, ಸಂಪನ್ಮೂಲ ವ್ಯಕ್ತಿಗಳಾದ ಉಪನ್ಯಾಸಕರಾದ ವೆಂಕಟರಮಣ ಆಚಾರ್ಯ, ಅಧ್ಯಾಪಕರಾದ‌ ರಘುರಾಮ್ ಭಟ್ ಮೊದಲಾದವರು ಉಪಸ್ಥಿತರಿದ್ದರು.

ಜಮೀಯ್ಯತುಲ್ ಫಲಾಹ್ ಉಳ್ಳಾಲ ತಾಲೂಕು ಅಧ್ಯಕ್ಷರಾದ ಅಬ್ದುಲ್ ನಾಸೀರ್ ಕೆಕೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಾಗಾರದಲ್ಲಿ ಸುಮಾರು 650 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.



Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News