ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

Update: 2025-01-16 13:25 GMT

ಮಂಗಳೂರು: ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ 2024-25ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಶುಲ್ಕ ಮರುಪಾವತಿ ಯೋಜನೆಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿಗಳಿಗೆ ಅನ್‌ಲೈನ್ ಅರ್ಜಿಗಳನ್ನು ಸಲ್ಲಿಸುವ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ.

ಪೋರ್ಟಲ್ ರಡಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in ಅಥವಾ ಸಹಾಯವಾಣಿ ಸಂಖ್ಯೆ ಮೊ.ಸಂ: 8277799990 ಅಥವಾ ತಾಲೂಕು ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News