ದ.ಕ. ಗ್ರಾಮ ಆಡಳಿತ ಅಧಿಕಾರಿಗಳ ನೇಮಕಾತಿಯ ತಾತ್ಕಾಲಿಕ ಪಟ್ಟಿ ಪ್ರಕಟ
ಮಂಗಳೂರು: ದ.ಕ.ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 50 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಒಟ್ಟು 146 ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಗಾಗಿ ಜ.7ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಾಜರಾಗಲು ಸೂಚಿಸಲಾಗಿತ್ತು. ಈ ಪೈಕಿ ಒಟ್ಟು 139 ಅಭ್ಯರ್ಥಿಗಳು ಹಾಜರಾಗಿರುತ್ತಾರೆ. ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲಾಗಿ, ಮೆರಿಟ್ ಮತ್ತು ಮೀಸಲಾತಿ ಆಧಾರದಲ್ಲಿ 50 ಅರ್ಹ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು 1:1 ಅನುಪಾತದಲ್ಲಿ ಹಾಗೂ ಹೆಚ್ಚುವರಿ ತಾತ್ಕಾಲಿಕ ಪಟ್ಟಿಯನ್ನು ದಕ್ಷಿಣ ಕನ್ನಡ ಜಿಲ್ಲಾ ವೆಬ್ ಸೈಟ್ www.dk.nic.in
ಅಭ್ಯರ್ಥಿಗಳ ಪಟ್ಟಿಯಲ್ಲಿ ಆಕ್ಷೇಪಣೆಗಳಿದ್ದಲ್ಲಿ ಜ.23ರಂದು ಸಂಜೆ 53ರೊಳಗೆ ಖುದ್ದಾಗಿ ಅಥವಾ ಅಂಚೆ ಮೂಲಕ ದ.ಕ. ಜಿಲ್ಲಾಧಿಕಾರಿ ಕಚೆೇರಿಗೆ ಸಲ್ಲಿಸುವಂತೆ ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೆೇರಿ, ಬಂದರ್ ರಸ್ತೆ, ಮಂಗಳೂರು ಇದರ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.