ಗ್ರಾಮಮಟ್ಟದಲ್ಲೂ ಸಾಹಿತ್ಯ ಸಮ್ಮೇಳನದ ಅಗತ್ಯವಿದೆ: ಯು.ಟಿ.ಖಾದರ್

Update: 2025-02-21 15:24 IST
ಗ್ರಾಮಮಟ್ಟದಲ್ಲೂ ಸಾಹಿತ್ಯ ಸಮ್ಮೇಳನದ ಅಗತ್ಯವಿದೆ: ಯು.ಟಿ.ಖಾದರ್
  • whatsapp icon

ಮಂಗಳೂರು, (ಬಿ.ಎಂ.ಇದಿನಬ್ಬ ವೇದಿಕೆ) ಫೆ.21: ಗ್ರಾಮ ಮಟ್ಟದಲ್ಲೂ ಸಾಹಿತ್ಯ ಸಮ್ಮೇಳನದ ಅಗತ್ಯವಿದೆ ಇದರಿಂದ ಸ್ಥಳೀಯ ಪ್ರತಿಭೆಗಳಿಗೆ ಇನ್ನಷ್ಟು ಪ್ರೋತ್ಸಾಹ ದೊರೆತಂತಾಗುತ್ತದೆ ಎಂದು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅಭಿಪ್ರಾಯಿಸಿದ್ದಾರೆ.

ಅವರು ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿರುವ 2 ದಿನಗಳ ದ.ಕ. ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು.

ಗ್ರಾಮದಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲು ಸರಕಾರ ಅನುದಾನ ನೀಡಬೇಕು. ಪ್ರತಿ ಮನೆ ಮನೆ ಯಲ್ಲೂ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಆಗಬೇಕು.ಮನೆಯ ಹಿರಿಯರು ತಮ್ಮ ಮಕ್ಕಳಲ್ಲಿ ಪುಸ್ತಕ ಓದುವ ಬಗ್ಗೆ ಆಸಕ್ತಿ ಮೂಡಿಸುವಂತಾಗಬೇಕು ಎಂದರು.

ಸಾಹಿತ್ಯ ಸಮ್ಮೇಳನಗಳು ನಮ್ಮ ಭಾಷೆ, ಸಂಸ್ಕೃತಿಯನ್ನು ಒಂದು ಪೀಳಿಗೆಯಿಂದ ಇನ್ನೊಂದು ಪೀಳಿಗೆಗೆ ವರ್ಗಾಯಿಸುವ ಮಹತ್ವದ ಕಾರ್ಯಕ್ರಮ. ಒಂದು ಭಾಷೆ ಬೆಳೆಯಬೇಕಾದರೆ ಇತರ ಬಾಷೆಗಳ ಬಗ್ಗೆ ಪ್ರೀತಿ ಹೊಂದಿರಬೇಕು. ಆಗ ಭಾಷಾ ಸೌಹಾರ್ದ ಸಾಧ್ಯ ಎಂದವರು ಹೇಳಿದರು.

ಜನರು ಒಳ್ಳೆಯ ಪುಸ್ತಕ ಓದುವುದರಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡಲು ಸಾಧ್ಯ.ಈ ನಿಟ್ಟಿನಲ್ಲಿ ತಾನು ವಿಧಾನ ಸಭೆಯ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜಿಸಿರುವ ಮುಖ್ಯ ಉದ್ದೇಶವಾಗಿದೆ ಎಂದವರು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News