ಕೊಲೆಯತ್ನ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ
Update: 2025-03-14 23:26 IST

ಮಂಗಳೂರು: ಹಳೆಯ ದ್ವೇಷಕ್ಕೆ ಸಂಬಂಧಿಸಿ ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಬೈಕ್ ಸವಾರನನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.