ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2025-03-16 17:53 IST
ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
  • whatsapp icon

ಮಂಗಳೂರು, ಮಾ.16: ಎರಡು ದಿನಗಳ ಹಿಂದೆ ಕೋಣಾಜೆ ಮತ್ತು ಉಳ್ಳಾಲ ಪರಿಸರದಲ್ಲಿ ಪತ್ತೆ ಹಚ್ಚಲಾಗಿದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಮಂಜೇಶ್ವರ ಕಡಂಬಾರ್‌ನ ಅಬ್ದುಲ್ ಫೈಜಲ್.ಎಂ ಯಾನೆ ಪೈಜು(26) ಬಂಧಿತ ಆರೋಪಿ.

ಆರೋಪಿಯ ವಶದಿಂದ 1 ಪಿಸ್ತೂಲ್, 1 ಸಜೀವ ಮದ್ದುಗುಂಡು ಹಾಗೂ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ ರೂ. 2,10,000 ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ತಿಳಿಸಿದ್ದಾರೆ.

ಆರೋಪಿಯನ್ನು ಕಾಸರಗೋಡು ಜಿಲ್ಲೆ, ಮಂಜೇಶ್ವರದ ಬಳಿಯ ಮೊರ್ತಾನಾ ಎಂಬಲ್ಲಿಂದ ಮಾ.15ರಂದು ದಸ್ತಗಿರಿ ಮಾಡಿ ಆತನ ವಶದಿಂದ ಪಿಸ್ತೂಲ್, ಸಜೀವ ಮದ್ದುಗುಂಡು ಹಾಗೂ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಅರೋಪಿಯನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ ಅಗ್ರವಾಲ್ ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ಫೈಜಲ್.ಎಂ ವಿರುದ್ಧ ಈ ಹಿಂದೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಎರಡು ಹಲ್ಲೆ ಪ್ರಕರಣಗಳು ದಾಖಲಾಗಿರುತ್ತದೆ. ಎರಡು ದಿನಗಳ ಹಿಂದೆ ಕೋಣಾಜೆ ಮತ್ತು ಉಳ್ಳಾಲ ಪರಿಸರದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ 5 ಮಂದಿ ಅಂತರ್‌ರಾಜ್ಯ ಕ್ರಿಮಿನಲ್‌ಗಳನ್ನು ಬಂಧಿಸಿ ಅವರಿಂದ ಅಕ್ರಮ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಬ್ದುಲ್ ಫೈಜಲ್‌ನ್ನು ಬಂಧಿಸಿದರು

ಕಾರ್ಯಾಚರಣೆಯಲ್ಲಿ ಉಪ ಪೊಲೀಸ್ ಆಯುಕ್ತರುರಾದ ಸಿದ್ದಾರ್ಥ ಗೋಯಲ್ ಮತ್ತು ಕೆ ರವಿಶಂಕರ್ ರವರ ನಿರ್ದೇಶನದಲ್ಲಿ ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ.ಎಂ. ಪಿಎಸ್‌ಐಗಳಾದ ಸುದೀಪ್ ಎಂ.ವಿ. ಶರಣಪ್ಪ ಭಂಡಾರಿ, ನರೇಂದ್ರ, ಎಎಸ್‌ಐಗಳಾದ ಮೋಹನ್ ಕೆ ವಿ ಮತ್ತು ರಾಮ ಪೂಜಾರಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News