ಬಂಟ್ವಾಳ : ಹಿರಿಯ ಕಾಂಗ್ರೆಸ್ ಮುಖಂಡ ನೋಣಯ್ಯ ಪೂಜಾರಿ ನಿಧನ

ಬಂಟ್ವಾಳ : ಹಿರಿಯ ಕಾಂಗ್ರೆಸ್ ಮುಖಂಡ, ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪಕೋಡಿ ನಿವಾಸಿ ನೋಣಯ್ಯ ಪೂಜಾರಿ (85) ಅವರು ಅಲ್ಪಕಾಲದ ಅಸೌಖ್ಯದಿಂದ ರವಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಮೃತರು ತುರ್ತು ಪರಿಸ್ಥಿತಿ ಸಂದರ್ಭ ದೀರ್ಘ ಕಾಲ ಜೈಲಿನಲ್ಲಿದ್ದರು. ಬಂಟ್ವಾಳ ಭೂನ್ಯಾಯ ಮಂಡಳಿ ಸದಸ್ಯರಾಗಿದ್ದರಲ್ಲದೆ ಎರಡು ಅವಧಿಯಲ್ಲಿ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.
ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ, ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದ ಅವರು ರಾಜೀವ ಯುವಕ ಮಂಡಲ ಬಾಯಿಲ ಇದರ ಗೌರವಾಧ್ಯಕ್ಷರು, ಗಣೇಶ ಗೆಳೆಯರ ಬಳಗ ಅಧ್ಯಕ್ಷರಾಗಿದ್ದರು.
ಮೃತರು ಮೂವರು ಪುತ್ರರು, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧು ಬಳಗವನ್ನು ಆಗಲಿದ್ದಾರೆ.
ಕರ್ನಾಟಕ ವಿಧಾನಸಭಾಧ್ಯಕ್ಷ ಯು. ಟಿ. ಖಾದರ್ , ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ಹಿರಿಯ ನ್ಯಾಯವಾದಿ ಅಶ್ವನಿ ಕುಮಾರ್ ರೈ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ ಹರಿಕೃಷ್ಣ ಬಂಟ್ವಾಳ್, ಜಿ.ಪಂ. ಮಾಜಿ ಸದಸ್ಯರಾದ ಬಿ. ಪದ್ಮಶೇಖರ್ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷರುಗಳಾದ ಚಂದ್ರಹಾಸ ಕರ್ಕೆರ, ಕೆ. ಪದ್ಮನಾಭ ರೈ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರುಗಳಾದ ಬಿ.ಎಂ.ಅಬ್ಬಾಸ್ ಅಲಿ, ಸುದೀಪ್ ಕುಮಾರ್ ಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಕೆ.ಎಚ್. ಅಬೂಬಕ್ಕರ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮೊದಲಾದವರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.