ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡುಬಿದಿರೆ

Update: 2025-03-17 17:45 IST
ಕೋಮುವಾದದ ಹೆಸರಿನಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ನಿಲ್ಲಲಿ: ರಾಧಾ ಮೂಡುಬಿದಿರೆ
  • whatsapp icon

ಮಂಗಳೂರು, ಮಾ.17: ದೇಶದ ಐಕ್ಯತೆಯನ್ನು ಒಡೆಯಲು ಸಂಚು ರೂಪಿಸುತ್ತಿರುವ ಕೋಮುವಾದಿ ಶಕ್ತಿಗಳು ತನ್ನ ಬೇಳೆ ಬೇಯಿಸಿಕೊಳ್ಳಲು ಮಹಿಳೆಯರನ್ನು ಪ್ರಧಾನ ಅಸ್ತ್ರವನ್ನಾಗಿಸಿದೆ. ಹಾಗಾಗಿ ಕೋಮು ವಾದದ ಹೆಸರಿನಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ವಿರುದ್ಧ ಮಹಿಳೆಯರು ಸಂಘಟಿತ ಹೋರಾಟ ನಡೆಸಬೇಕು ಎಂದು ಸಿಐಟಿಯು ಕರ್ನಾಟಕ ರಾಜ್ಯ ಉಪಾಧ್ಯಕ್ಷೆ, ಪುತ್ತಿಗೆ ಗ್ರಾಪಂ ಅಧ್ಯಕ್ಷೆ ರಾಧಾ ಮೂಡುಬಿದಿರೆ ಹೇಳಿದರು.

ನಗರದ ಮಂಗಳೂರು ಮಿನಿ ವಿಧಾನಸೌಧದ ಮುಂದೆ ಸಿಐಟಿಯು ಸಂಯೋಜಿತ ದುಡಿಯುವ ಮಹಿಳೆ ಯರ ಸಮನ್ವಯ ಸಮಿತಿಯ ಆಶ್ರಯದಲ್ಲಿ ಶನಿವಾರ ನಡೆದ 117ನೇ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಿಐಟಿಯು ಜಿಲ್ಲಾ ನಾಯಕಿ ಪದ್ಮಾವತಿ ಶೆಟ್ಟಿ, ದುಡಿಯುವ ಮಹಿಳೆಯರ ಸಮನ್ವಯ ಸಮಿತಿಯ ನಾಯಕಿಯರಾದ ಜಯಂತಿ ಬಿ. ಶೆಟ್ಟಿ, ಈಶ್ವರಿ ಬೆಳ್ತಂಗಡಿ, ನಳಿನಾಕ್ಷಿ ಶೆಟ್ಟಿ, ಭಾರತಿ ಬೋಳಾರ, ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕಿಯರಾದ ಕಿರಣಪ್ರಭಾ, ಅಸುಂತ ಡಿಸೋಜ ಮಾತನಾಡಿದರು. ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಸಮಾರೋಪ ಭಾಷಣ ಮಾಡಿದರು.

ಮಹಿಳಾ ವಿಮೋಚನೆ ಹಾಗೂ ಮಹಿಳೆಯರ ಸಂಕಷ್ಟಗಳ ಬಗ್ಗೆ ಗಿರಿಜಾ ಮೂಡುಬಿದಿರೆ, ಜಯಶ್ರೀ ಬೆಳ್ತಂಗಡಿ, ವಸಂತಿ ಕುಪ್ಪೆಪದವು ಹಾಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಜೆ. ಬಾಲಕೃಷ್ಣ ಶೆಟ್ಟಿ, ವಸಂತ ಆಚಾರಿ, ಸದಾಶಿವದಾಸ್, ಸಂತೋಷ್ ಬಜಾಲ್, ರಿಜ್ವಾನ್ ಹರೇಕಳ, ಪ್ರಮೀಳಾ ದೇವಾಡಿಗ, ಫ್ಲೇವಿ ಕ್ರಾಸ್ತಾ ಅತ್ತಾವರ, ಗ್ರೆಟ್ಟಾ ಟೀಚರ್, ವಿಲಾಸಿನಿ ತೊಕ್ಕೋಟ್ಟು, ಪ್ರಮೋದಿನಿ, ಜಯಲಕ್ಷ್ಮಿ, ರೋಹಿಣಿ, ಗೀತಾ, ಭವಾನಿ ವಾಮಂಜೂರು, ಲಕ್ಷ್ಮಿ ಮೂಡುಬಿದಿರೆ, ಲೋಲಾಕ್ಷಿ ಬಂಟ್ವಾಳ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News