ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಮಾಧ್ಯಮ ಕಾರ್ಯಾಗಾರ

Update: 2025-03-17 18:14 IST
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ಮಾಧ್ಯಮ ಕಾರ್ಯಾಗಾರ
  • whatsapp icon

ಮಂಗಳೂರು : ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾಹಿತಿ ಶಿಕ್ಷಣ ಸಂವಹನ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಆರೋಗ್ಯ ಸಂವಾದ ಕಾರ್ಯಕ್ರಮ ಸೋಮವಾರ ವಾರ್ತಾ ಇಲಾಖೆ ಸಭಾಂಗಣದಲ್ಲಿ ನಡೆಯಿತು.

ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಹರೀಶ್ ರೈ ಮಾತನಾಡಿ ಯಾವುದೇ ಒಂದು ಸರಕಾರದ ಇಲಾಖೆಯ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುವಲ್ಲಿ ಅಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಮಾಧ್ಯಮ ಗಳ ಪಾತ್ರ ಜವಾಬ್ದಾರಿಗಳು ಮಹತ್ವದ್ದಾಗಿದೆ ಎಂದು ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮಾತನಾಡಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ವಾರ್ತಾಧಿ ಕಾರಿ ಬಿ.ಎ ಖಾದರ್ ಶಾ ಅಧ್ಯಕ್ಷತೆ ವಹಿಸಿದ್ದರು. ಮೈಸೂರು ವಿಭಾಗೀಯ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಉಪಸ್ಥಿತರಿದ್ದರು.

ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ಸುದರ್ಶನ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್‌ಚಂದ್ರ ಕುಲಾಲ್, ಜಿಲ್ಲಾ ಆರ್.ಸಿ. ಎಚ್. ಅಧಿಕಾರಿ ಡಾ.ರಾಜೇಶ್ ಬಿ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಖತೀಜಾ ದಿಲ್‌ಷಾದ್ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಉಳೆಪಾಡಿ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News