ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ

ಮಂಗಳೂರು: ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವತಿಯಿಂದ ಅಂತರ್‌ರಾಷ್ಟ್ರೀಯ ಮಹಿಳಾ ದಿನ ಮತ್ತು ವಿಶ್ವ ಮೂತ್ರಪಿಂಡ ದಿನವನ್ನು ಸೋಮವಾರ ಆಚರಿಸಲಾಯಿತು.
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆ, ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ನೆಫ್ರೋ-ಮೂತ್ರಶಾಸ್ತ್ರ ಮತ್ತು ಆಸ್ಪತ್ರೆ ಆಡಳಿತದ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಆಸ್ಪತ್ರೆ ಆಡಳಿತ ವಿಭಾಗದ ಸಹಾಯಕ ಆಸ್ಪತ್ರೆ ಕಾರ್ಯಾಚರಣೆ ಅಧಿಕಾರಿ ನಿಲೇಶ ಮೆಲಿಟಾ ಕಾರ್ವಲ್ಲೊ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಎಕ್ಸ್‌ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಾ. ಉಷಾಪ್ರಭಾ ಎನ್ ನಾಯಕ್ , ಯೆನೆಪೋಯ ಪರಿಗಣಿತ ವಿವಿಯ ನಿರ್ದೇಶಕಿ ಸುರುಮಿ ಫರ್ಹಾದ್ ಯೆನೆಪೋಯ, ಮಂಗಳೂರು ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ , ಮಂಗಳೂರು ನಗರ ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ಧನ್ಯಾ ನಾಯಕ್ , ಸಿಸಿಆರ್‌ಬಿ ಎಸಿಪಿ ಗೀತಾ ಕುಲಕರ್ಣಿ , ಯೆನೆಪೋಯ ಅಲೈಡ್ ಹೆಲ್ತ್‌ಕೇರ್ ಪ್ರೊಫೆಶನ್ಸ್ ವಿಭಾಗದ ಡೀನ್ ಡಾ. ಸುನೀತಾ ಸಲ್ಡಾನ್ಹಾ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮೂತ್ರಪಿಂಡಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಸಂತೋಷ್ ಪೈ ಬಿ.ಎಚ್ ಮಾತನಾಡಿದರು.
ಯೆನೆಪೊಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಹಬೀಬ್ ರೆಹಮಾನ್ ಎ.ಎ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನೆಲ್ವಿನ್ ನೆಲ್ಸನ್ ಸ್ವಾಗತಿಸಿದರು, ಯುರೋಲಜಿ ವಿಭಾಗದ ಮುಖ್ಯಸ್ಥ ಡಾ. ಮುಜೀಬ್ ರಹಿಮಾನ್ ವಂದಿಸಿದರು.

