ಗಾಂಜಾ ಸೇವನೆ ಆರೋಪ: ಇಬ್ಬರ ಸೆರೆ

Update: 2025-03-18 22:44 IST
ಗಾಂಜಾ ಸೇವನೆ ಆರೋಪ: ಇಬ್ಬರ ಸೆರೆ
  • whatsapp icon

ಮಂಗಳೂರು, ಮಾ.18: ಕಾವೂರು ಮತ್ತು ಬಂದರು ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಎರಡೂ ಪ್ರಕರಣದ ಬಗ್ಗೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

*ಬೊಂದೇಲ್ ಕೃಷ್ಣನಗರ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದ ಮೇರೆಗೆ ಸ್ಥಳೀಯ ನಿವಾಸಿ ಮನೀಶ್ (28) ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

*ಬಂದರ್‌ನ ಉತ್ತರ ದಕ್ಕೆ ಕಡೆಗೆ ತೆರಳುವ ರಸ್ತೆಯಲ್ಲಿ ಅಮಲು ಪದಾರ್ಥ ಸೇವಿಸಿ ತೂರಾಡುತ್ತಿದ್ದ ಆರೋಪದ ಮೇರೆಗೆ ನಗರದ ಟಿ.ಟಿ. ರೋಡ್ ನಿವಾಸಿ ಸವಿನ್‌ರಾಜ್ (18) ಎಂಬಾತನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News