ಯೆನೆಪೋಯ ಶಿಕ್ಷಣ ಸಂಸ್ಥೆಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ

Update: 2025-03-19 22:09 IST
ಯೆನೆಪೋಯ ಶಿಕ್ಷಣ ಸಂಸ್ಥೆಗೆ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿ
  • whatsapp icon

ಮಂಗಳೂರು, ಮಾ.19: ಯೆನೆಪೋಯ ಪರಿಗಣಿತ ವಿವಿಯ ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಶಿಕ್ಷಣ ಸಂಸ್ಥೆ ನಾಲ್ಕು ಪ್ರತಿಷ್ಠಿತ ಎನ್‌ಎಸ್‌ಎಸ್ ರಾಜ್ಯ ಪ್ರಶಸ್ತಿಗಳನ್ನು ಪಡೆದುಕೊಂಡಿದೆ.

ಬೆಂಗಳೂರಿನ ರಾಜಭವನದಲ್ಲಿ ನಡೆದ ಪ್ರತಿಷ್ಠಿತ ಸಮಾರಂಭದಲ್ಲಿ ಕರ್ನಾಟಕದ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾರ್ಯದರ್ಶಿ ರಂದೀಪ್ ಡಿ. ಕರ್ನಾಟಕ ಸರಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ. ಡಿ. ಕಾರ್ತಿಗೆಯೇನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಯೆನೆಪೋಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಎ.ಭಾಗವತ್, ಯೆನೆಪೊಯ ಪರಿಗಣಿತ ವಿವಿ ಎನ್‌ಎಸ್‌ಎಸ್ ಸಂಯೋಜಕಿ ಡಾ.ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

ಪವಿತ್ರಾ ಶೆಟ್ಟಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಅವರ ನಾಯಕತ್ವ, ಬದ್ಧತೆ ಮತ್ತು ಕಾರ್ಯ ನಿರ್ವಹಣೆಯ ಬಗ್ಗೆ ನೀಡಿದ ಉತ್ತಮ ಮಾರ್ಗದರ್ಶನಕ್ಕಾಗಿ ಅತ್ಯುತ್ತಮ ರಾಜ್ಯ ಎನ್‌ಎಸ್‌ಎಸ್ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಸಂದಿದೆ.

ಮುಹಮ್ಮದ್ ನಿಶ್ವಾನ್‌ಗೆ ಸಮುದಾಯ ಸಂಪರ್ಕ, ಪರಿಸರ ಸಂರಕ್ಷಣಾ ಪ್ರಯತ್ನಗಳು, ಗ್ರಾಮೀಣಾ ಭಿವೃದ್ಧಿ ಯೋಜನೆಗಳಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮಕ್ಕಾಗಿ ಅತ್ಯುತ್ತಮ ರಾಜ್ಯ ಎನ್‌ಎಸ್‌ಎಸ್ ಸ್ವಯಂಸೇವಕ ಪ್ರಶಸ್ತಿ ಲಭಿಸಿದೆ.

ಧನ್ಯಶ್ರೀ ಡಿ. ಭಟ್ ಸಮಾಜ ಕಲ್ಯಾಣಕ್ಕೆ ನೀಡಿದ ನಿಸ್ವಾರ್ಥ ಕೊಡುಗೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಮತ್ತು ಶಿಕ್ಷಣ ಉಪಕ್ರಮಗಳಲ್ಲಿ ಉತ್ತಮ ಪಾಲ್ಗೊಳ್ಳುವಿಕೆಗಾಗಿ ರಾಜ್ಯ ಎನ್‌ಎಸ್‌ಎಸ್ ಸ್ವಯಂಸೇವಕಿ ಪ್ರಶಸ್ತಿ ಲಭಿಸಿದೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News