ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ನಿರ್ಣಯ ಅಂಗೀಕಾರಕ್ಕೆ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ಶ್ಲಾಘನೆ

Update: 2025-03-20 20:07 IST
  • whatsapp icon

ಮಂಗಳೂರು: ಕೇಂದ್ರ ಸರಕಾರದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ರಾಜ್ಯ ವಿಧಾನಸಭೆಯು ನಿರ್ಣಯ ಅಂಗೀಕರಿಸಿರುವ ಮತ್ತು ಶಾಸನವನ್ನು ಹಿಂದೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ ಎಂದು ದ.ಕ. ಜಿಲ್ಲಾ ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ತಿಳಿಸಿದೆ.

ಈ ಕಾಯ್ದೆಯು ದೇಶದ ಎಲ್ಲಾ ರಂಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವು ದಿಲ್ಲ. ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ. ಆ ಹಿನ್ನೆಲೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ಸಾರ್ವತ್ರಿಕ ಅಭಿಪ್ರಾಯಗಳನ್ನು ಗೌರವಿಸಲು ವಿಳಂಬವಿಲ್ಲದೆ ಕ್ರಮ ಕೈಗೊಳ್ಳು ವಂತೆ ಒಕ್ಕೂಟದ ಅಧ್ಯಕ್ಷ ಸಿರಾಜ್ ಬಜ್ಪೆ, ಪ್ರಧಾನ ಕಾರ್ಯದರ್ಶಿ ಎಸ್.ಅಬೂಬಕ್ಕರ್ ಸಜಿಪ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News