ಫಿಟ್ನೆಸ್ ತರಬೇತುದಾರರ ನೇಮಕಾತಿಗೆ ಅರ್ಜಿ ಆಹ್ವಾನ
Update: 2025-03-23 17:37 IST

ಮಂಗಳೂರು, ಮಾ.23: ಕರ್ನಾಟಕ ಕ್ರೀಡಾ ಪ್ರಾಧಿಕಾರದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ಫಿಟ್ನೆಸ್ ತರಬೇತಿ ನೀಡುವ ಸಲುವಾಗಿ 14 ಫಿಟ್ನೆಸ್ (ಪ್ರಶಿಕ್ಷಕರು) ತರಬೇತುದಾರರನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
1 ವಷರ್ದ ಅವಧಿಯವರೆಗೆ ತಾತ್ಕಾಲಿಕವಾಗಿ ಮಾಸಿಕ ಸಂಚಿತ ವೇತನ, ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು. ಅರ್ಜಿ ಮತ್ತು ದಾಖಲೆಗಳನ್ನು ಎ.15ರಂದು ಸಂಜೆ 4ರೊಳಗೆ ಮಹಾ ನಿರ್ದೇಶಕರು, ಕರ್ನಾಟಕ ಕ್ರೀಡಾ ಪ್ರಾಧಿಕಾರ, ರಾಜ್ಯಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರಿಗೆ ಇಲ್ಲಿಗೆ ಸಲ್ಲಿಸಬೇಕು.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.