ಗ್ರಾಮಾಂತರ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ: ಶಾಸಕ ಉಮಾನಾಥ ಕೋಟ್ಯಾನ್

ಸುರತ್ಕಲ್ : ಗ್ರಾಮಾಂತರ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಅಧ್ಯತೆ ನೀಡಲಾಗಿದೆ ಎಂದು ಮೂಡಬಿದ್ರೆ ಶಾಸಕರಾದ ಉಮಾನಾಥ ಕೋಟ್ಯಾನ್ ನುಡಿದರು.
ಅವರು ಮಧ್ಯ ಸರ್ಕಲ್ ನಿಂದ ಮಧ್ಯ ಗುರುನಗರ 9ನೇ ವಿಭಾಗದ ಐಟಿಐ ತನಕದ ಮುಖ್ಯ ರಸ್ತೆಗೆ ಲೋಕೋಪಯೋಗಿ ಇಲಾಖೆಯ ಸುಮಾರು 1 ಕೋಟಿ ರೂ. ಅನುದಾನ ಡಾಂಬರೀಕರಣಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಳೆದ ಬಾರಿ ಬಿಜೆಪಿ ಸರಕಾರ ಇರುವಾಗ ಸುಮಾರು 2ಸಾವಿರ ಕೋಟಿ ರೂ. ಅನುದಾನ ತಂದು ಹೆಚ್ಚಿನ ರಸ್ತೆಗಳ ಅಭಿವೃದ್ಧಿ ಕೆಲಸ ಮಾಡಿದ್ದು ಅದರ ತೃಪ್ತಿ ನನಗಿದೆ ಎಂದರು.
ಇಲ್ಲಿ ಅಗಬೇಕಿದ್ದ ರಸ್ತೆ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸ್ಥಳೀಯ ಪ್ರಮುಖರು ಗಮನಕ್ಕೆ ತಂದ ನಂತರ ಅಗತ್ಯ ಅನುದಾನವನ್ನು ಹೊಂದಿಕೊಂಡು ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದರು.
ಚೇಳಾಯರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಮಾತನಾಡಿ, ಇಷ್ಟರವರೆಗೆ ಶಾಸಕರು ಚೇಳಾಯರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 30 ಕೋಟಿ ರೂ.ಗಳಷ್ಟು ಅನುದಾನ ಇರಿಸಿ ಬೇರೆ ಬೇರೆ ಅಭಿವೃದ್ಧಿ ಕಾಮಗಾರಿಯನ್ನು ಮಾಡಿದ್ದಾರೆ. ಈ ರಸ್ತೆಯು ಬಹಳ ಪ್ರಮುಖ್ಯ ವಾದುದು ಅದನ್ನು ಮನಗಂಡು ಅದಷ್ಟು ಶೀಘ್ರವಾಗಿ ಈ ರಸ್ತೆಗೆ ಅನುದಾನವಿರಿಸಿದ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸಿದರು.
ಚಾಳಾಯರು ಗ್ರಾಮ ಪಂಚಾಯತ್ ಅಧ್ಯಕ್ಷ ಜಯಾನಂದ, ಸದಸ್ಯರಾದ ಯಶೋದ ಬಿ., ಬಾಲಕೃಷ್ಣ ಶೆಟ್ಟಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ವಜ್ರಾಕ್ಷಿ ಪಿ. ಶೆಟ್ಟಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ವಸಂತ್, ಗುತ್ತಿಗೆದಾರ ಎಂ.ಜಿ. ಹುಸೇನ್ ಮುಂತಾದವರು ಉಪಸ್ಥಿತರಿದ್ದರು.