ಗಾಂಜಾ ಸೇವನೆ ಆರೋಪ: ಇಬ್ಬರ ಬಂಧನ
Update: 2025-03-25 20:20 IST

ಮಂಗಳೂರು, ಮಾ.25: ಗಾಂಜಾ ಸೇವನೆಯ ಆರೋಪಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ಗಳಲ್ಲಿ ಕಂಕನಾಡಿ ನಗರ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಸರಿಪಳ್ಳ ಉಮಿಕಾನ ಮೈದಾನದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಧನುಷ್ ಮತ್ತು ಮರೋಳಿ ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡಿದ ಆರೋಪದಲ್ಲಿ ಹಿತೇಶ್ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅದರಂತೆ ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲುಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.