ಯೆನೆಪೋಯದಲ್ಲಿ ವಿಶ್ವ ಕ್ಷಯ ರೋಗ ದಿನಾಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿಗಳ ಕಚೇರಿ ನರ್ಸಿಂಗ್ ಫೌಂಡೇಶನ್ ವಿಭಾಗ, ಯೆನೆಪೋಯ ನರ್ಸಿಂಗ್ ಕಾಲೇಜು ದೇರಳಕಟ್ಟೆ ಇವುಗಳ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಕ್ಷಯರೋಗ ದಿನವನ್ನು ಮಾ.24ರಂದು ಯೆನೆಪೋಯ ವಿಶ್ವವಿದ್ಯಾಲಯದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವು ಜಾಥಾದ ಮುಖಾಂತರ ಪ್ರಾರಂಭವಾಯಿತು. ಯೆನೆಪೋಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ. ವಿಜಯಕುಮಾರ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ. ಎಚ್ ಆರ್ ತಿಮ್ಮಯ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ದಕ್ಷಿಣ ಕನ್ನಡ ಇವರು ಕ್ಷಯರೋಗ ಕೊನೆಗಾಣಿಸಲು ಕಾರ್ಯನಿರ್ವಹಿಸುವ ಎಲ್ಲರನ್ನೂ ಪ್ರಶಂಶಿಸಿದರು.
ಮುಖ್ಯ ಅತಿಥಿಗಳಾಗಿ ಯೆನೆಪೋಯ ವಿಶ್ವವಿದ್ಯಾಲಯದ ಕುಲಸಚಿವ ಡಾ. ಕೆ ಎಸ್ ಗಂಗಾಧರ ಸೋಮಯಾಜಿ ಹಾಗೂ ಯೆನೆಪೋಯ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಲೀನಾ ಕೆಸಿ, ನರ್ಸಿಂಗ್ ಫೌಂಡೇಶನ್ ವಿಭಾಗದ ಮುಖ್ಯಸ್ಥ ಪ್ರೊ. ಶಶಿಕುಮಾರ್ ಜವಡಗಿ ಮತ್ತು ಸಹಪ್ರಾಧ್ಯಾಪಕ ಡಾ. ಹೆಝಿಲ್ ರೀಮ ಬರ್ಬೋಜ ಉಪಸ್ಥಿತರಿದ್ದರು.
ಕ್ಷಯರೋಗದ ಜಾಗೃತಿಗೆ ಸಂಬಂದಪಟ್ಟ ಮೈಮ್ ಶೋ, ಕಿರುನಾಟಕ ಮತ್ತು ನೃತ್ಯದ ಮೂಲಕ ಯೆನೆಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಸುಮಾರು 300 ಜನರು ಭಾಗಿಯಾಗಿದ್ದರು. ಕಾರ್ಯಕ್ರಮದ ಮುಖ್ಯ ಆಯೋಜಕರಾದ ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ. ಖತೀಜ ದಿಲ್ಶಾದ್ ಎಂ ಪಿ ಸ್ವಾಗತಿಸಿದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ.ಕೆ ಉಳೆಪಾಡಿ ವಂದಿಸಿದರು. ಯೆನೆಪೋಯ ನರ್ಸಿಂಗ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಪವಿತ್ರ ಕಾರ್ಯಕ್ರಮ ನಿರೂಪಿಸಿದರು.