ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ಪ್ರತಿಭಾ ಪ್ರದರ್ಶನ ಉತ್ತಮ ವೇದಿಕೆ: ಸ್ಪೀಕರ್ ಯು.ಟಿ.ಖಾದರ್

ಮಂಗಳೂರು, ಮಾ.25;ಮಕ್ಕಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ಅವರ ವ್ಯಕ್ತಿತ್ವ ವಿಕಸನಕ್ಕೆ ಮಕ್ಕಳ ಪ್ರತಿಭಾ ಪ್ರದರ್ಶನ ಉತ್ತಮ ವೇದಿಕೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.
ಕರ್ನಾಟಕ ಸರಕಾರದ ರಾಜ್ಯ ಬಾಲಭವನ ಸೊಸೈಟಿ, ದಕ್ಷಿಣ ಕನ್ನಡ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ ಮಂಗಳ ವಾರ ಹಮ್ಮಿಕೊಂಡ ಮಕ್ಕಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಮಕ್ಕಳ ಪ್ರತಿಭಾ ಪ್ರದರ್ಶನ ವ್ಯಕ್ತಿ ತ್ವ ವಿಕಸನಕ್ಕೆ ಮತ್ತು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಪೂರಕವಾಗಿದೆ. ದೇಶ ಬಲಿಷ್ಠ ವಾಗಬೇಕಾದರೆ ಶಾಲಾ ಕೊಠಡಿ ಯಲ್ಲಿ ಮಕ್ಕಳು ಉತ್ತಮ ವಾತವರಣ ದೊಂದಿಗೆ ಬೆಳೆಯಬೇಕಾಗಿದೆ. ಇದರೊಂದಿಗೆ ದೇಶಕ್ಕೆ ಸಮಾಜಕ್ಕೆ ಕೊಡುಗೆ ನೀಡುವಂತಾಗಬೇಕು. ಇಂದಿನ ಮಕ್ಕಳು ಮುಂದಿನ ಪ್ರಜೆಗಳಾಗಿ ದೇಶದಲ್ಲಿ ಉನ್ನತ ಸ್ಥಾನ ಪಡೆದು ದೇಶದ ಸಂಪತ್ತಾಗಬೇಕು ಎಂದು ಯು.ಟಿ.ಖಾದರ್ ಶುಭ ಹಾರೈಸಿದರು.
ಸಮಾರಂಭದಲ್ಲಿ ಮುಖ್ಯ ಮಂತ್ರಿಗಳ ಮಾಧ್ಯಮ ಸಲಹೆ ಗಾರ ಕೆ.ವಿ.ಪ್ರಭಾಕರ್ ಮಾತನಾಡುತ್ತಾ, ಮಕ್ಕಳ ಪ್ರತಿಭಾ ಪ್ರದರ್ಶನ ಕ್ಕೆ ಉತ್ತಮ ವೇದಿಕೆ.ಇಂದಿನ ಮಕ್ಕಳು ಮಣ್ಷಿನ ಸಂಪರ್ಕ ತಪ್ಪಿ ಮೊಬೈಲ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಇದು ಮಕ್ಕಳ ಕಲಿಕೆ,ವ್ಯಕ್ತಿತ್ವದ ಮೇಲೆ ವ್ಯತಿರಿಕ್ತವಾದ ಪರಿಣಾಮ ಬೀರುತ್ತಿದೆ ಜೊತೆಗೆ ಮಕ್ಕಳು ಐಷಾರಾಮಿ ಜೀವನದತ್ತ ವಾಲುತ್ತಿದ್ದಾರೆ.ಈ ಅಪಾಯವನ್ನು ತಪ್ಪಿಸಬೇಕಾಗಿದೆ ಮಕ್ಕಳು ಕ್ರಿಯಾಶೀಲ ಚಟುವಟಿಕೆಯಲ್ಲಿ ತೊಡಗಿಸಿ ಕೊಳ್ಳು ವಂತಾಗಬೇಕು ಎಂದರು.
ಸಮಾರಂಭದ ವೇದಿಕೆಯಲ್ಲಿ ರಾಜ್ಯ ತೆಂಗಿನನಾರು ಅಭಿವೃದ್ಧಿ ನಿಯಮಿತದ ಅಧ್ಯಕ್ಷ ನಾಗರಾಜ್ ,ರಾಜ್ಯ ಗೇರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ ಮಮತಾ ಗಟ್ಟಿ, ಇಲಾಖೆಗೆ ವಾಹನ ಕೊಡುಗೆ ನೀಡಿದ ಉದ್ಯಮಿಸಿ ಎಂ.ಫಾರೂಕ್ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ದಕ್ಷಿಣ ಕನ್ನಡ ಜಿಲ್ಲಾ ಉಪ ನಿರ್ದೇಶಕ ಉಸ್ಮಾನ್ ಮೊದಲಾದವರು ಉಪಸ್ಥಿತರಿದ್ದರು.