ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಉಳ್ಳಾಲ: ಇಲ್ಲಿನ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಇದರ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ ಮಾಸ್ತಿಕಟ್ಟೆ ಆಝಾದ್ ನಗರದಲ್ಲಿ ನಡೆಯಿತು.
ಉಳ್ಳಾಲ ಸಯ್ಯದ್ ಮದನಿ ದರ್ಗಾದ ಮಾಜಿ ಅಧ್ಯಕ್ಷ ಹಾಜಿ ಅಬ್ದುಲ್ ರಶೀದ್ ಮಾತನಾಡಿ, ಉಳ್ಳಾಲದಲ್ಲಿ ಶಾಂತಿ ಮತ್ತು ಸ್ನೇಹಮಯ ವಾತಾವರಣ ನಿರ್ಮಿಸಲು ನಾವೆಲ್ಲರೂ ಕಟಿಬದ್ಧರಾಗಬೇಕು ಎಂದು ಹೇಳಿದರು.
ಪೊಸಕುರಲ್ ನಿರ್ದೇಶಕ ವಿದ್ಯಾಧರ್ ಶೆಟ್ಟಿ ಮಾತನಾಡಿ, ಹಿಂದೆ ಮನೆಗಳು ದೂರವಾಗಿತ್ತು, ಮನಸ್ಸುಗಳು ಹತ್ತಿರವಾಗಿತ್ತು, ಆದರೆ ಈಗ ಮನೆಗಳು ಹತ್ತಿರವಾಗಿ ಮನಸ್ಸುಗಳು ದೂರವಾಗಿವೆ ಎಂದರು.
ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷ ನವಾಝ್ ಉಳ್ಳಾಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಉಳ್ಳಾಲ ಸಯ್ಯದ್ ಮದನಿ ದರ್ಗಾದ ಅಧ್ಯಕ್ಷ ಹಾಜಿ ಹನೀಫ್ ಹಾಜಿ, ಬಬ್ಬುಕಟ್ಟೆ ಹಿರಾ ಶಾಂತಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎ.ಎಚ್. ಮಹ್ಮೂದ್, ಉಳ್ಳಾಲ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಪ್ರಧಾನ ಕಾರ್ಯದರ್ಶಿ ಸಿರಿಲ್ ರಾಬರ್ಟ್ ಡಿಸೋಜ, ಉಳ್ಳಾಲ ನಗರ ಸಭೆ ಮಾಜಿ ಸದಸ್ಯ ಫಾರೂಕ್ ಉಳ್ಳಾಲ್, ಯು.ಎಚ್.ಫಾರೂಕ್, ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಗೌರವಾಧ್ಯಕ್ಷ ಹಾಜಿ ಮುಹಮ್ಮದ್ ತ್ವಾಹ, ಜಲೀಲ್ ಇಂದಾದಿ ಉಸ್ತಾದ್ ಮೊದಲಾದವರು ಉಪಸ್ಥಿತರಿದ್ದರು.
ಜಲಾಲ್ ಮದನಿ ದುಆ ನೆರವೇರಿಸಿದರು, ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮುಸ್ತಫ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಪ್ರಾಸ್ತವಿಕವಾಗಿ ಮಾತನಾಡಿ ವಂದಿಸಿದರು.