‘ವಿವಿ ಗೌರವ ಡಾಕ್ಟರೇಟ್ ’ ಸಹಕಾರ ಕ್ಷೇತ್ರಕ್ಕೆ ಸಂದ ಗೌರವ: ಡಾ.ಎಂ.ಎನ್.ರಾಜೇಂದ್ರ ಕುಮಾರ್

Update: 2025-04-01 18:36 IST
‘ವಿವಿ ಗೌರವ ಡಾಕ್ಟರೇಟ್ ’ ಸಹಕಾರ ಕ್ಷೇತ್ರಕ್ಕೆ ಸಂದ ಗೌರವ: ಡಾ.ಎಂ.ಎನ್.ರಾಜೇಂದ್ರ ಕುಮಾರ್
  • whatsapp icon

ಮಂಗಳೂರು ,ಎ.1: ಮಂಗಳೂರು ವಿಶ್ವವಿದ್ಯಾಲಯದ 43ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿಯನ್ನು ಶನಿವಾರ ರಾಜ್ಯದ ಪ್ರಮುಖ ಸಹಕಾರಿ ಧುರೀಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಸಮಾಜ ಸೇವೆಯಲ್ಲಿ ಸಲ್ಲಿಸಿದ ಅಪೂರ್ವ ಸಾಧನೆಗಾಗಿ ಪ್ರದಾನ ಮಾಡಲಾಯಿತು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಗಣ್ಯರ ಸಮ್ಮುಖದಲ್ಲಿ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರಿಗೆ ಪದವಿ ಪ್ರದಾನ ಮಾಡಿದರು

ಸಹಕಾರ ಕ್ಷೇತ್ರಕ್ಕೆ ಸಂದ ಗೌರವ : ಗೌರವ ಡಾಕ್ಟರೇಟ್ ಪದವಿ ನನಗೊಬ್ಬನಿಗೆ ಸೇರಿದಲ್ಲ. ಇದು ನಾನು ಪ್ರತಿನಿಧಿಸುವ ಸಹಕಾರ ಕ್ಷೇತ್ರಕ್ಕೆ ಸಂದ ಗೌರವ. ಸಹಕಾರ ಕ್ಷೇತ್ರವನ್ನು ನಾನು ಸದಾ ಗೌರವಿಸುತ್ತಾ ಬಂದವನು. ಈ ಸಹಕಾರ ಕ್ಷೇತ್ರದಲ್ಲಿ ನಿರ್ವಂಚನೆಯಿಂದ ಕಾರ್ಯನಿರ್ವಹಿಸುತ್ತಿರುವುದರಿಂದ ನನಗೆ ಈ ಎಲ್ಲಾ ಗೌರವ - ಸ್ಥಾನಮಾನಗಳು ಲಭಿಸಿವೆ. ಇನ್ನು ಮುಂದೆಯೂ ಸಹಕಾರ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಈ ಪದವಿ ಪ್ರೇರಣೆ ಆಗಿದೆ ಎಂದು ರಾಜೇಂದ್ರ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಹೊಸತನದ ಹರಿಕಾರ: ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಸಾರ್ಥಕ, ಪ್ರಾಮಾಣಿಕ ಸೇವೆಯನ್ನು ಕಳೆದ 31 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಮಾಡುತ್ತಿರುವ ಡಾ. ಎಂ.ಎನ್.ರಾಜೇದ್ರ ಕುಮಾರ್ ಅವರು ಈ ಬ್ಯಾಂಕ್ನ್ನು ಅತ್ಯುನ್ನತ ಮಟ್ಟಕ್ಕೇರಿಸಿದ ಅದ್ವಿತೀಯ ನಾಯಕ. ಮನೆ ಬಾಗಿಲಿಗೆ ಬ್ಯಾಂಕಿಂಗ್ ಪರಿಕಲ್ಪನೆ ಯೊಂದಿಗೆ ಸುಸಜ್ಜಿತ ವಾಹನದಲ್ಲಿ ಮೊಬೈಲ್ ಬ್ಯಾಂಕ್ ಸೇವೆಯನ್ನು ರಾಜ್ಯದ ಸಹಕಾರಿ ರಂಗದಲ್ಲಿ ಮೊದಲ ಬಾರಿಗೆ ಪರಿಚಯಿಸಿದ ಹೆಗ್ಗಳಿಕೆ ಕೂಡ ಇವರದ್ದು. ಇವರ ಅಧ್ಯಕ್ಷಗಿರಿಯಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿಗೆ 22ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, 19ಬಾರಿ ನಬಾರ್ಡ್ ಪ್ರಶಸ್ತಿಗಳು ಸಂದಿವೆ. ಮಾತ್ರವಲ್ಲ 3 ಬಾರಿ ಬ್ಯಾಂಕಿಂಗ್ ಪ್ರೊಂಟಿಯರ್ಸ್ ಪ್ರಶಸ್ತಿ ಹಾಗೂ 4 ಬಾರಿ ಎಪಿವೈ ರಾಷ್ಟ್ರೀಯ ಪ್ರಶಸ್ತಿಯೂ ಲಭಿಸಿದೆ.

ಪ್ರಶಸ್ತಿಗಳ ಸರಮಾಲೆ : ಸಹಕಾರಿ ಬ್ಯಾಂಕಿಂಗ್ ಹಾಗೂ ಸಾಮಾಜಿಕ ರಂಗದಲ್ಲಿ ಗಣನೀಯ ಸೇವೆಯನ್ನು ಸಲ್ಲಿಸುತ್ತಿರುವ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಸಾಮಾಜಿಕ ಸ್ಪಂದನೆಯ ಕಾರ್ಯಗಳನ್ನು ಪರಿಗಣಿಸಿ ಹಲವಾರು ರಾಷ್ಟಿಯ - ಅಂತರರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿವೆ. ಕರ್ನಾಟಕ ಸರಕಾರದಿಂದ ‘ ಸಹಕಾರ ರತ್ನ ’ ಲಭಿಸಿದೆ. ಮಾತ್ರವಲ್ಲ ‘ಸಹಕಾರ ವಿಶ್ವ ಬಂಧುಶ್ರೀ’ , ‘ ಮದರ್ ತೆರೆಸಾ ಸದ್ಭಾವನಾ ಪ್ರಶಸ್ತಿ ’, ‘ಮಹಾತ್ಮಾ ಗಾಂಧಿ ಸಮ್ಮಾನ್ ಪ್ರಶಸ್ತಿ’ , ‘ಬೆಸ್ಟ್ ಚೇರ್ಮೆನ್ ನ್ಯಾಷನಲ್ ಎವಾರ್ಡ್’ , ‘ ನ್ಯಾಷನಲ್ ಎಕ್ಸ್ ಲೆನ್ಸ್ ಎವಾರ್ಡ್’ , ‘ಔಟ್ ಸ್ಟೆಂಡಿಂಗ್ ಗ್ಲೋಬಲ್ ಲೀಡರ್ ಶಿಪ್ ಎವಾರ್ಡ್ ’ , ಬಹು ಪ್ರಭಾವಶಾಲಿ ಸಹಕಾರ ನಾಯಕ ಪ್ರಶಸ್ತಿ , ಅಂತಾರಾಷ್ಟ್ರೀಯ ಶ್ರೇಷ್ಠ ನಾಯಕತ್ವ ಎವಾರ್ಡ್, ಅಂತಾರಾ ಷ್ಟ್ರೀಯ ಸಾಧಕ ಪ್ರಶಸ್ತಿ , ಮದರ್ ತೆರೆಸಾ ಮೆಮೆರಿಯಲ್ ನ್ಯಾಶನಲ್ ಎವಾರ್ಡ್ ಹಾಗೂ ಏಶ್ಯಾನೆಟ್ ಸುವರ್ಣ ನ್ಯೂಸ್ ಚಾನೆಲ್ ನಿಂದ ಉಜ್ವಲ ಉದ್ಯಮಿ ಪ್ರಶಸ್ತಿ ಹೀಗೆ ಹಲವಾರು ರಾಷ್ಟ್ರೀಯ, ಅಂತರ್‌ರಾಷ್ಟ್ರೀಯ ಪ್ರಶಸ್ತಿಗಳು ಅವರಿಗೆ ಸಂದಿವೆ. 

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News