ಸುರತ್ಕಲ್: ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿ ನಾಲ್ವರಿಗೆ ಮುಖ್ಯಮಂತ್ರಿ ಪದಕ
Update: 2025-04-01 21:50 IST

ಸುರತ್ಕಲ್: ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಸೇರಿ ನಾಲ್ವರಿಗೆ 2024ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪಟ್ಟಿಗೆ ಆಯ್ಕೆಯಾಗಿದ್ದಾರೆ.
ಪೊಲೀಸ್ ಇಲಾಖೆಯಲ್ಲಿನ ಸೇವೆಯನ್ನು ಪರಿಗಣಿಸಿ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಪೊಲೀಸ್ ಉಪ ನಿರೀಕ್ಷಕರಾದ ರಾಘವೇಂದ್ರ ನಾಯ್ಕ್, ಹೆಡ್ ಕಾಸ್ಟೇಬಲ್‌ಗಳಾದ ಉಮೇಶ್ ಮತ್ತು ಅಣ್ಣಪ್ಪ ವಂಡ್ಸೆ ಈ ಬಾರಿ ಮುಖ್ಯ ಮಂತ್ರ ಪದಕಕ್ಕೆ ಬಾಜನರಾಗಿದ್ದಾರೆ. ಮುಖ್ಯಮಂತ್ರಿ ಪದಕ ಪುರಸ್ಕೃತ ಸುರತ್ಕಲ್ ಪೊಲೀಸ್ ಠಾಣೆಯ ಅಧಿಕಾರಿ ಸಿಬ್ಬಂದಿಗೆ ಸಮಾನ ಮನಸ್ಕ ಸಂಘಟನೆಗಳು ಅಭಿನಂದಿಸಿದೆ.