ಸಾಧಕರ ಸಾಧನೆಯ ಕೃತಿ ಭವಿಷ್ಯದ ಯುವ ಜನರಿಗೆ ದಾರಿದೀಪ: ಕೃಷ್ಣ ಜೆ. ಪಾಲೆಮಾರ್

Update: 2025-04-04 19:36 IST
ಸಾಧಕರ ಸಾಧನೆಯ ಕೃತಿ ಭವಿಷ್ಯದ ಯುವ ಜನರಿಗೆ ದಾರಿದೀಪ: ಕೃಷ್ಣ ಜೆ. ಪಾಲೆಮಾರ್
  • whatsapp icon

ಮಂಗಳೂರು: ಸಾಧಕರ ಬದುಕಿನ ಸಾಧನೆಯನ್ನು ಕೃತಿ ರೂಪದಲ್ಲಿ ದಾಖಲಿ ಸಿದರೆ ಅದು ಮುಂದಿನ ಯುವ ಪೀಳಿಗೆಗೆ ದಾರಿದೀಪವಾಗುತ್ತದೆ ಎಂದು ಮಾಜಿ ಸಚಿವ ಕೃಷ್ಣ.ಜೆ.ಪಾಲೆಮಾರ್ ಹೇಳಿದರು.

ಹರಿಕಥಾ ಪರಿಷತ್ ಮಂಗಳೂರು ಮತ್ತು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಮಹಾಬಲ ಶೆಟ್ಟಿ ಕೂಡ್ಲು ಅವರ ‘ಮಹಾಪರ್ವ’ ಅಭಿನಂದನಾ ಸಂಪುಟವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಹರಿಕಥಾ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಮಹಾಬಲ ಶೆಟ್ಟಿ ಅವರ ಸಾಧನೆಗಳು ‘ಮಹಾಪರ್ವ’ದಲ್ಲಿ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮನೆ ಮನ ತಲುಪಲು ಸಾಧ್ಯವಾಗಲಿದೆ. ಭವಿಷ್ಯದ ಜನಾಂಗದ ಸಾಧನೆಗೆ ಸ್ಪೂರ್ತಿಯಾಗಲಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಡಾ.ಹರಿಕೃಷ್ಣ ಪುನರೂರು ಮಾತನಾಡಿ ಮಕ್ಕಳಿಗೂ ಹರಿಕಥೆ ಕಲಿಸಿ ಅವರನ್ನು ಹರಿದಾಸರನ್ನಾಗಿ ಮಾಡುವ ಮೂಲಕ ಮಹಾಬಲ ಶೆಟ್ಟಿಯವರು ಧರ್ಮಜಾಗೃತಿಯ ಕೆಲಸ ಮಾಡುತ್ತಿರು ವುದು ಶ್ಲಾಘನೀಯ ಎಂದು ಹೇಳಿದರು.

‘ಮಹಾಹಾಪರ್ವ’ ಸಂಪಾದಕ ಭಾಸ್ಕರ ರೈ ಕುಕ್ಕುವಳ್ಳಿ ಅವರು ಮಾತನಾಡಿ, ಮಹಾಬಲ ಶೆಟ್ಟಿ ಅವರು ಅನೇಕ ಏಳುಬೀಳುಗಳನ್ನು ಕಂಡು ಸಾಧನೆಯ ಶಿಖರವೇರಿದ್ದಾರೆ. 50 ಹರಿಕಥಾಯಾನ ಪೂರೈಸಿದ ಅಪರೂಪದ ಹರಿದಾಸರು. ಹರಿಕಥೆ ಕಲೆಯನ್ನು ಉಳಿಸಿ, ಬೆಳೆಸಲು ಪ್ರಥಮ ಬಾರಿಗೆ ಹರಿಕಥಾ ಪರಿಷತ್ ಹುಟ್ಟು ಹಾಕಿದ್ದಾರೆ. ಹಲವಾರು ಹರಿದಾಸರನ್ನು ಸೃಷ್ಟಿಸಿದ್ದಾರೆ ಎಂದರು.

ಮಹಾಬಲ ಶೆಟ್ಟಿ ಕೂಡ್ಲು ಅವರು ಮಾತನಾಡಿ, ಶೇಣಿ ಗೋಪಾಲಕೃಷ್ಣ ಭಟ್ ಅವರಿಂದಾಗಿ ಹರಿದಾಸ ನಾದೆ. ಹರಿಕಥೆ ನಶಿಸುವ ಕಲೆ ಅಲ್ಲ. ಅದ ಇನ್ನಷ್ಟು ಪ್ರಭಾವಶಾಲಿ ರೂಪದಲ್ಲಿ ಮೂಡಿಬರುವಂತಾಗ ಬೇಕು ಎಂದರು.

ದ.ಕ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ , ವಕೀಲ ಗುರುಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.

ಹರಿಕಥಾ ಪರಿಷತ್‌ನ ಖಜಾಂಜಿ ಎಸ್.ಪಿ.ಗುರುದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಚಾಲಕ ಸುಧಾಕರ ರಾವ್ ಪೇಜಾವರ ಸ್ವಾಗತಿಸಿ, ಪ್ರೊ.ಜಿ.ಕೆ.ಭಟ್ ವಂದಿಸಿದರು. ಪರಿಷತ್‌ನ ಕಾರ್ಯದರ್ಶಿ ತೋನ್ಸೆ ಪುಷ್ಕಳ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News