ಪುಳಿಂಚ ಪ್ರಶಸ್ತಿಗೆ ನಾಲ್ವರು ಕಲಾವಿದರು ಆಯ್ಕೆ

Update: 2025-04-10 19:40 IST
ಪುಳಿಂಚ ಪ್ರಶಸ್ತಿಗೆ ನಾಲ್ವರು ಕಲಾವಿದರು ಆಯ್ಕೆ
  • whatsapp icon

ಮಂಗಳೂರು: ಅಗಲಿದ ಹಿರಿಯ ಯಕ್ಷಗಾನ ಕಲಾವಿದ, ಐತಿಹಾಸಿಕ ಕರ್ನಾಟಕ ಮೇಳದಲ್ಲಿ ಸುದೀರ್ಘ ತಿರುಗಾಟ ಮಾಡಿದ ಬೆಜ್ಜದಗುತ್ತು ದಿ. ಪುಳಿಂಚ ರಾಮಯ್ಯ ಶೆಟ್ಟರ ಸ್ಮರಣಾರ್ಥ ಮೂರು ವರ್ಷಕ್ಕೊಮ್ಮೆ ನೀಡಲಾಗುವ ‘ಪುಳಿಂಚ ಪ್ರಶಸ್ತಿ’ಗೆ ಈ ಬಾರಿ ಯಕ್ಷಗಾನದ ಪ್ರಸಿದ್ಧ ಕಲಾವಿದರು ಆಯ್ಕೆಯಾಗಿದ್ದಾರೆ.

ತೆಂಕುತಿಟ್ಟಿನ ಹಿರಿಯ ಕಲಾವಿದರಾದ ಬೋಳಾರ ಸುಬ್ಬಯ್ಯ ಶೆಟ್ಟಿ, ಗೋಣಿಬೀಡು ಸಂಜಯ ಕುಮಾರ್ ಶೆಟ್ಟಿ, ಮಿಜಾರು ತಿಮ್ಮಪ್ಪಅವರನ್ನು 2023-25ನೇ ಸಾಲಿನ ಪುಳಿಂಚ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಿ. ಬಂಟ್ವಾಳ ಜಯರಾಮ ಆಚಾರ್ಯರಿಗೆ ಮರಣೋತ್ತರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಪುಳಿಂಚ ಸೇವಾ ಪ್ರತಿಷ್ಠಾನ (ರಿ) ಮಂಗಳೂರು ಇದರ ಅಧ್ಯಕ್ಷ ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿ ತಿಳಿಸಿದ್ದಾರೆ.

*ಪುಳಿಂಚ ಪ್ರಶಸ್ತಿ ಹಾಗೂ ಮರಣೋತ್ತರ ಪ್ರಶಸ್ತಿಗಳು ತಲಾ 25,000 ರೂ. ನಗದು, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಮೇ 4ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೈವಸ್ಥಾನ ದಲ್ಲಿ ಕ್ಷೇತ್ರದ ಆಡಳಿತದಾರ ನ್ಯಾಯವಾದಿ ಪುಳಿಂಚ ಶ್ರೀಧರ ಶೆಟ್ಟಿಯ ನೇತೃತ್ವದಲ್ಲಿ ನಡೆಯುವ ಕಾರ್ಯ ಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರಶಸ್ತಿ ಆಯ್ಕೆ ಸಮಿತಿಯ ಸಲಹೆಗಾರ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News