ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2025-04-11 19:16 IST
ಬ್ಯಾರಿ ಅಕಾಡಮಿಯ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ
  • whatsapp icon

ಮಂಗಳೂರು, ಎ.11: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಜೀವಮಾನ ಸಾಧನೆಗೆ ಕೊಡ ಮಾಡುವ 2024ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಬ್ಯಾರಿ ಭಾಷೆ, ಸಾಹಿತ್ಯ, ಸಂಶೋಧನೆ, ಕಲೆ, ಜನಪದ ಮತ್ತು ಸಂಘಟನಾ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ 3 ಮಂದಿ ಮಹನೀಯರನ್ನು 2024ನೇ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು. ಗೌರವ ಪ್ರಶಸ್ತಿಯು 50,000 ರೂ. ನಗದು, ಪ್ರಮಾಣ ಪತ್ರ, ಸ್ಮರಣಿಕೆ ಮತ್ತು ಫಲಪುಷ್ಪಾಹಾರಗಳು ಒಳಗೊಂಡಿರುತ್ತದೆ.

ಅರ್ಜಿಗಳನ್ನು ಸ್ವತ: ಸಾಧಕರು ಅಥವಾ ಸಾಧಕರ ಪರವಾಗಿ ಇತರರು ಶಿಫಾರಸು ಮಾಡಿ ಸಲ್ಲಿಸ ಬಹುದು. ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ, ಆದರೆ ಪ್ರಶಸ್ತಿಗೆ ಆಯ್ಕೆ ಆಗದಿರುವ ಸಾಧಕರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗುವುದು. ಸಾಧನೆಯ ಪೂರಕ ವಿವರಗಳಿದ್ದಲ್ಲಿ ಅಕಾಡಮಿಗೆ ಕಳುಹಿಸಿಕೊಡಬಹುದು.

ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳು, ಭಾವಚಿತ್ರ ಹಾಗೂ ದಾಖಲೆ ಗಳ ಜೆರಾಕ್ಸ್ ಪ್ರತಿಗಳೊಂದಿಗೆ ಲಕೋಟೆಯ ಮೇಲೆ ಬ್ಯಾರಿ ಅಕಾಡಮಿ ಗೌರವ ಪ್ರಶಸ್ತಿ 2024 ಎಂದು ಬರೆದು ರಿಜಿಸ್ಟ್ರಾರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿ, ಸಾಮರ್ಥ್ಯ ಸೌಧ, 2ನೇ ಮಹಡಿ, ಮಂಗಳೂರು ತಾಪಂ ಹಳೆ ಕಟ್ಟಡ, ಮಿನಿ ವಿಧಾನಸೌಧದ ಬಳಿ, ಮಂಗಳೂರು-575001 ಈ ವಿಳಾಸಕ್ಕೆ ಅಥವಾ bearyacademyyahoo.in ಮೇಲ್ ಗೆ ಎ.30ರ ಒಳಗಾಗಿ ಸಲ್ಲಿಸುವಂತೆ ಅಕಾಡಮಿಯ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News