ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಹುಚ್ಚಾಟ ಪ್ರಕರಣ; ಯುವಕರನ್ನು ಪತ್ತೆ ಹಚ್ಚಿದ ಪೊಲೀಸರು

Update: 2025-04-11 21:30 IST
ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಹುಚ್ಚಾಟ ಪ್ರಕರಣ; ಯುವಕರನ್ನು ಪತ್ತೆ ಹಚ್ಚಿದ ಪೊಲೀಸರು
  • whatsapp icon

ಸುಳ್ಯ: ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಳಿತು ಯುವಕರ ತಂಡ ಹುಚ್ಚಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಚ್ಚಾಟ ಮೆರೆದ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.

ಕೆಲ ದಿನಗಳ ಹಿಂದೆ ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ ಕಾರಿನಲ್ಲಿದ್ದ 7 ಜನರಲ್ಲಿ 6 ಮಂದಿ ಹುಚ್ಚಾಟ ಮೆರೆದಿದ್ದರು. ಮೇಲ್ಭಾಗ ತೆರದುಕೊಂಡಿದ್ದು ಆ ಭಾಗದಿಂದ ಇಬ್ಬರು ಯುವಕರು ಮೇಲೆ ಬಂದ್ದಿದ್ದು, ಇಬ್ಬರು ಹಿಂದಿನ ಸೀಟಿನ ಎಡ ಹಾಗೂ ಬಲ ಬದಿಯ ಡೋರ್ ಭಾಗದಿಂದ ಮೇಲೆ ಬಂದಿದ್ದು, ಇಬ್ಬರು ಮುಂದಿನ ಡೋರ್‍ನ ಭಾಗದಿಂದ ಮೇಲೆದ್ದು ನಿಂತು ಹುಚ್ಚಾಟ ಮೆರೆಯುತ್ತಿರುವ ವಿಡೀಯೋ ವೈರಲ್ ಆಗಿತ್ತು.

ಈ ಬಗ್ಗೆ ಸುಳ್ಯ ಪೊಲೀಸರು ಸ್ವಯಂ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದು, ಹುಚ್ಚಾಟ ಮೆರೆದ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವರೆಂದು ಪತ್ತೆ ಹಚ್ಚಿದ್ದಾರೆ.

ಕಾರಿನಲ್ಲಿ 7 ಮಂದಿ ಇದ್ದು ಅವರು ಮಡಿಕೇರಿಯಿಂದ ಭಟ್ಕಳಕ್ಕೆ ತೆರಳುವ ವೇಳೆ ಈ ರೀತಿ ಪುಂಡಾಟ ಮೆರೆದಿದ್ದಾರೆ. ಸಾಜೀಲ್ ಎಂಬಾತ ಕಾರನ್ನು ಚಾಲನೆ ಮಾಡುತ್ತಿದ್ದು, ಅತೀಫ್, ಸುಮನ್, ಜಯೇಶ್, ಸಾಜೀಬ್, ಸಾಹಿಬಝ್, ಹಸನ್ ಎಂಬವರು ಕಾರಿನ ಮೇಲೆ ಪುಂಡಾಟ ಮೆರೆದವರು ಎಂದು ತಿಳಿದುಬಂದಿದೆ.

ಕೃತ್ಯ ಎಸಗಿದವರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News