ಕದ್ರಿ: ‘ರೋಹನ್ ಗಾರ್ಡನ್’ ವಸತಿ ಸಮುಚ್ಚಯಕ್ಕೆ ಶಿಲಾನ್ಯಾಸ

ಮಂಗಳೂರು: ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಮೂರು ದಶಕಗಳಿಗೂ ಅಧಿಕ ಸೇವೆ ನೀಡುತ್ತಿರುವ ರೋಹನ್ ಕಾರ್ಪೊರೇಶನ್‌ನ ನೂತನ ವಸತಿ ಸಮುಚ್ಚಯ ‘ರೋಹನ್ ಗಾರ್ಡನ್’ಗೆ ಶನಿವಾರ ಶಿಲಾನ್ಯಾಸ ನೆರವೇರಿಸಲಾಯಿತು. ಈ ಸಂದರ್ಭ ಯೋಜನೆಯ ಮಾಹಿತಿ ಹೊಂದಿರುವ ಕೈಪಿಡಿ ಹಾಗೂ ವೀಡಿಯೋ ಬಿಡುಗಡೆಗೊಳಿಸಲಾಯಿತು.
ಬೆಂದೂರು ಚರ್ಚ್‌ನ ಧರ್ಮಗುರು ವಂ. ವಾಲ್ಟರ್ ಡಿಸೋಜಾ ಆಶೀರ್ವಚನ ನೀಡಿ ದೇವರು ನೀಡಿದ ಅವಕಾಶವನ್ನು ಡಾ. ರೋಹನ್ ಮೊಂತೇರೊ ಸಮರ್ಪಕವಾಗಿ ಬಳಸಿಕೊಂಡಿದ್ದಾರೆ. ನಿರಂತರ ಪರಿಶ್ರಮದ ಮೂಲಕ ಗುಣಮಟ್ಟದ ಸೇವೆಯೊಂದಿಗೆ ರಿಯಲ್ ಎಸ್ಟೇಟ್‌ನಲ್ಲಿ ಬೆಳೆಯುತ್ತಿರುವುದು ಸಂತಸ ತಂದಿದೆ. ಪಾರದರ್ಶಕ ವ್ಯವಹಾರ ನಡೆಸಿದ ಕಾರಣ ದೇವರ ಆಶೀರ್ವಾದ ಅವರ ಮೇಲೆ ಸದಾ ಇರಲಿದೆ. ಡಾ. ರೋಹನ್ ಮೊಂತೆರೋ ಅವರ ಎಲ್ಲಾ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಸಮಾಜಕ್ಕೆ ಮತ್ತಷ್ಟು ಸೇವೆ ನೀಡುವಂತಾಗಿಲೆ ಎಂದು ಹೇಳಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಜನರ ಅಪೇಕ್ಷೆಗೆ ತಕ್ಕಂತೆ ಡಾ. ರೋಹನ್ ಮೊಂತೇರೊ ವಸತಿ ಸಮುಚ್ಚಯಗಳನ್ನು ನಿರ್ಮಿಸುತ್ತಿದ್ದಾರೆ. ಅವರಿಂದ ಮನೆಗಳನ್ನು ಖರೀದಿಸಿದ ಗ್ರಾಹಕರು ಸಂತೃಪ್ತಿಯ ಜೀವನ ಸಾಗಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೋಹನ್ ಕಾರ್ಪೊರೇಷನ್ 50 ಕ್ಕೂ ಅಧಿಕ ಸಮುಚ್ಚಯಗಳು ನಿರ್ಮಿಸಲಿ ಎಂದು ಆಶಿಸಿದರು.
ದೈಜಿವರ್ಲ್ಡ್‌ನ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮಾತನಾಡಿ ಮಂಗಳೂರಿನ ಬಹುತೇಕ ಕಡೆಗಳಲ್ಲಿ ರೋಹನ್ ಕಾರ್ಪೊರೇಷನ್‌ನ ಸಮುಚ್ಚಯಗಳೇ ಕಾಣಿಸುತ್ತಿವೆ. ನಗುಮುಖ ಮತ್ತು ಉತ್ತಮ ಗುಣಮಟ್ಟದ ಸೇವೆಯಿಂದ ಡಾ. ರೋಹನ್ ಮೊಂತೇರೊ ಅವರ ಯೋಜನೆಗಳು ಯಶಸ್ವಿಯಾಗಿವೆ ಎಂದರು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಮಾತನಾಡಿ, ಸಂಘಟಿತ ಕೆಲಸ ದಿಂದ ಬೆಳೆಯಲು ಸಾಧ್ಯವಿದೆ ಎಂಬುದಕ್ಕೆ ರೋಹನ್ ಕಾರ್ಪೊರೇಷನ್ ಸಾಕ್ಷಿಯಾಗಿದೆ. ಅವರ ಎಲ್ಲಾ ಯೋಜನೆಗಳು ಪಾರದರ್ಶಕವಾಗಿವೆ. ಪೂರ್ಣ ಪ್ರಮಾಣದ ದಾಖಲೆಗಳನ್ನು ಸಿದ್ಧಪಡಿಸಿದ ಬಳಿಕ ನಿರ್ಮಾಣ ಕಾರ್ಯಕ್ಕೆ ಮುಂದಾಗುವುದು ಅವರ ಹೆಗ್ಗಳಿಕೆಯಾಗಿದೆ. ರೋಹನ್ ಮೊಂತೆರೋ ಅವರ ಸಾಧನೆಯಿಂದ ನಗರದ ಬೆಳವಣಿಗೆಯಾಗುತ್ತಿದೆ. ಮುಡಾ ಮತ್ತು ನಗರ ಪಾಲಿಕೆಗೂ ಆದಾಯ ಹೆಚ್ಚಳವಾಗುತ್ತಿದೆ ಎಂದರು.
ರೋಹನ್ ಕಾರ್ಪೊರೇಷನ್‌ನ ಅಧ್ಯಕ್ಷ ರೋಹನ್ ಮೊಂತೇರೊ ಮಾತನಾಡಿ ‘ಕದ್ರಿ-ಶಿವಬಾಗ್ ಪ್ರದೇಶ ದಲ್ಲಿ ಆಧುನಿಕ ವ್ಯವಸ್ಥೆಗಳೊಂದಿಗೆ ವಸತಿ ಸಮುಚ್ಚಯ ನಿರ್ಮಾಣವಾಗುತ್ತಿದೆ. ರೋಹನ್ ಗಾರ್ಡನ್ ಐಷಾರಾಮಿ, ಸುರಕ್ಷತೆ ಮತ್ತು ಪರಿಸರ ಸ್ನೇಹಿ ವಾಸ ವ್ಯವಸ್ಥೆಯನ್ನು ಹೊಂದಲಿದೆ. ಶಾಂತ ಮತ್ತು ಹಸಿರು ಪರಿಸರದ ಅನುಭವ ನೀಡಲಿದೆ. ಐದು ಅಂತಸ್ತುಗಳ ಕಟ್ಟಡದಲ್ಲಿ 1,105 ರಿಂದ 1,550 ಚದರ ಅಡಿಗಳ 2 ಮತ್ತು 3 ಬಿಎಚ್‌ಕೆ-ಯ 28 ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲಾಗುವುದು ಎಂದರು.
ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಎಸ್‌ಸಿಡಿಸಿಸಿ ಬ್ಯಾಂಕ್ ನಿದೇಶಕರಾದ ದೇವಿಪ್ರಸಾದ್ ಶೆಟ್ಟಿ, ಶಶಿಕುಮಾರ್ ರೈ, ಮೇಘರಾಜ್, ಪಾಲಿಕೆಯ ಮಾಜಿ ಸದಸ್ಯ ನವೀನ್ ಡಿಸೋಜಾ ಮತ್ತಿತರರು ಪಾಲ್ಗೊಂಡಿದ್ದರು. ಶಾಹಿಲ್ ಜಹೀರ್ ಕಾರ್ಯಕ್ರಮ ನಿರೂಪಿಸಿದರು.
*ನೂತನ ವಸತಿ ಸಮುಚ್ಚಯದಲ್ಲಿ ಅತ್ಯಾಧುನಿಕ ವ್ಯವಸ್ಥೆಗಳಿವೆ. ಪ್ರತಿಯೊಂದು ಅಪಾರ್ಟ್‌ಮೆಂಟ್ ವಿಟ್ರಿಫೈಡ್ ಫ್ಲೋರಿಂಗ್, ಪ್ರೀಮಿಯಂ ಸ್ಯಾನಿಟರಿ ವೇರ್ ಮತ್ತು ಯುಪಿವಿಸಿ/ಅಲ್ಯೂಮಿನಿಯಂ ಕಿಟಕಿಗಳೊಂದಿಗೆ ಉತ್ತಮ ಗುಣಮಟ್ಟದ ನಿರ್ಮಾಣ ಹೊಂದಿದೆ. ವಿಶಾಲ ಒಳಾಂಗಣ, ಬಾಲ್ಕನಿಗಳು ಮತ್ತು ಸಮಕಾಲೀನ ವಾಸ್ತುಶಿಲ್ಪವನ್ನು ಹೊಂದಿದೆ. ಜಿಮೇಶಿಯಂ, 24/7 ಸಿಸಿಟಿವಿ ಮತ್ತು ಸ್ಮಾರ್ಟ್ ಸೆನ್ಸರ್ ದೀಪಗಳಂತಹ ಪ್ರೀಮಿಯಂ ಸೌಲಭ್ಯಗಳಿವೆ. ಎಲೆಕ್ಟಿಕ್ ವಾಹನ ಚಾರ್ಜಿಂಗ್ ಪಾಯಿಂಟ್ಸ್, ವಿಶಾಲ ಪಾರ್ಕಿಂಗ್, ಮಕ್ಕಳ ಆಟದ ಸ್ಥಳ ಮತ್ತು ಹಿರಿಯರಿಗಾಗಿ ವಿಶ್ರಾಂತಿ ಸ್ಥಳವಿದೆ. ಅಗ್ನಿಶಾಮಕ ವ್ಯವಸ್ಥೆ ವೀಡಿಯೋ ಡೋರ್ ಫೋನ್ ಮತ್ತು ಎ.ಆರ್.ಡಿ. ಅಟ್ಯಾಚ್ ಲಿಫ್ಟ್‌ಗಳ ಸೌಲಭ್ಯವಿದೆ. ನಗರದ ಪ್ರಮುಖ ಸ್ಥಳಗಳಿಗೆ ಸುಲಭ ಸಂಪರ್ಕವನ್ನು ಹೊಂದಿದ್ದು ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ ರೋಹನ್ ಕಾರ್ಪೊರೇಶನ್ ಮೊ.ಸಂ: 9845490100, ಇಮೇಲ್: info@rohancorporation.in , ವೆಬ್‌ಸೈಟ್: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು 575004 ಈ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

