ಮಂಗಳೂರು: ರೆಸ್ಟೊರೆಂಟ್‌ನಲ್ಲಿ ಆಕಸ್ಮಿಕ ಬೆಂಕಿ
Update: 2025-04-13 22:13 IST

ಮಂಗಳೂರು, ಎ.13: ನಗರದ ಬೆಂದೂರುವೆಲ್ ಬಳಿಯ ರಾಯಲ್ ಟ್ರೀಟ್ ರೆಸ್ಟೋರೆಂಟ್‌ನಲ್ಲಿ ರವಿವಾರ ಬೆಳಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಅಡುಗೆ ಕೋಣೆಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ವರದಿಯಾಗಿದೆ.
ರೆಸ್ಟೋರೆಂಟ್‌ನ ಅಡುಗೆ ಕೋಣೆಯ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಅಡುಗೆ ಕೋಣೆಯಲ್ಲಿ ಅಡುಗೆ ತಯಾರಿಸುತ್ತಿದ್ದಾಗಲೇ ಘಟನೆ ನಡೆದಿದೆ.
ಸ್ಥಳಕ್ಕೆ ಪಾಂಡೇಶ್ವರ ಅಗ್ನಿ ಶಾಮಕ ದಳದ ಸಿಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ವ್ಯಾಪಕ ಹೊಗೆ ಬರುವುದನ್ನು ಗಮನಿಸಿ ಸ್ಥಳದಲ್ಲಿ ನೂರಾರು ಮಂದಿ ಸೇರಿದಾಗ ಇದರಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು ಎಂದು ತಿಳಿದು ಬಂದಿದೆ.