ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ

ಮಂಗಳೂರು: ಸಾಮಾಜಿಕ ನ್ಯಾಯ, ಜಾತ್ಯತೀತತೆ, ಭಾತೃತ್ವವನ್ನು ಯಾರು ವಿರೋಧಿಸುತ್ತಾರೋ ಅವರೆಲ್ಲರೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಂದ ರಚನೆಗೊಂಡಿರುವ ಸಂವಿಧಾನವನ್ನೂ ವಿರೋಧಿಸುವವರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಸಂವಿಧಾನದ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೪ನೇ ಜನ್ಮದಿನಾಚರಣೆ ಅಂಗವಾಗಿ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸೋಮವಾರ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಾಬಾ ಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡುತ್ತಿದ್ದರು.
ನ್ಯಾಯ ಶಾಸ್ತ್ರಜ್ಞ, ಅರ್ಥಶಾಸ್ತ್ರಜ್ಞ, ಸಮಾಜ ಸುಧಾರಕರಾಗಿದ್ದ ಅಂಬೇಡ್ಕರ್ ಅವರು ಜೀವನದ ಉದ್ದಕ್ಕೂ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ. ಸಾಮಾಜಿಕ ನ್ಯಾಯದಿಂದ ವಂಚಿತರಾದ ದುರ್ಬಲ ವರ್ಗದ ಜನರಿಗೆ ನ್ಯಾಯ ದೊರಕಿಸಿಕೊಡಬೇಕೆನ್ನುವ ಅಪೇಕ್ಷೆ ಮೇರೆಗೆ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಅನೇಕ ಅನುಕೂಲತೆಗಳನ್ನು ನೀಡಿದ್ದಾರೆ. ಅಸ್ಪೃಶ್ಯತೆ, ಅಸಮಾನತೆಯ ವಿರುದ್ಧ ದಿಟ್ಟತನದಿಂದ ಹೋರಾಡಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಫಲವಾಗಿ ಇಂದು ದೇಶದ ಕೋಟ್ಯಂತರ ಜನರು ನಿಟ್ಟುಸಿರು ಬಿಡುತ್ತಿದ್ದಾರೆ ಎಂದು ಸ್ಮರಿಸಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ ಬಲಿಷ್ಠ ವಾಗಿ ಉಳಿಯಲು ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಕಾರಣ. ಅಸ್ಪೃಶ್ಯತೆಯ ವಿಷವರ್ತುಲದಲ್ಲಿ ಎಲ್ಲ ಹಕ್ಕುಗಳಿಂದ ವಂಚಿತರಾಗಿದ್ದ ಶೋಷಿತ ಸಮುದಾಯಗಳ ವಿಮೋಚನೆಗಾಗಿ, ಹಕ್ಕುಗಳಿಗಾಗಿ ಅವರು ಹೋರಾಡಿದರು ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎಂ.ಎಸ್. ಮಹಮ್ಮದ್, ಮಿಥುನ್ ರೈ, ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್.ಆರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಮೋಹನ್ ಕೋಟ್ಯಾನ್ ಮುಲ್ಕಿ, ಬಾಲಕೃಷ್ಣ ಅಂಚನ್, ಚಂದ್ರ ಶೇಖರ್ ಭಂಡಾರಿ, ಕೃಷ್ಣ ಪ್ರಸಾದ್ ಆಳ್ವ ಪುತ್ತೂರು, ಮುಖಂಡರಾದ ಶಶಿಧರ್ ಹೆಗ್ಡೆ, ಜಿ.ಕೃಷ್ಣಪ್ಪ, ಅಬ್ದುಲ್ ರವೂಫ್, ಪಿಯೂಸ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಲ್ಯಾನ್ಸ್ ಲೋಟೊ ಪಿಂಟೊ, ಟಿ.ಹೊನ್ನಯ್ಯ, ಕೆ.ಪಿ.ಥೋಮಸ್, ಕೇಶವ ಮರೋಳಿ, ಕೆ.ಕೆ.ಶಾಹುಲ್ ಹಮೀದ್, ಇಬ್ರಾಹೀಂ ನವಾಝ್, ಜೋಕಿಂ ಡಿ ಸೋಜ, ದಿನೇಶ್ ಮುಳೂರು, ಸುರೇಂದ್ರ ಕಂಬಳಿ, ವಿಶ್ವಾಸ್ ಕುಮಾರ್ ದಾಸ್, ನವೀನ್ ಡಿಸೋಜ, ಸುದರ್ಶನ್ ಜೈನ್, ಕೆ.ಅಪ್ಪಿ, ಅಬ್ಬಾಸ್ ಅಲಿ, ಅಶ್ರಫ್ ಬಜಾಲ್, ನೀರಜ್ ಚಂದ್ರಪಾಲ್, ಸಂಶುದ್ದೀನ್ ಬಂದರ್, ನಝೀರ್ ಬಜಾಲ್, ಶಾಲೆಟ್ ಪಿಂಟೊ, ಹಯಾತುಲ್ ಖಾಮಿಲ್, ಸುಹಾನ್ ಆಳ್ವ, ಮಂಜುಳಾ ನಾಯಕ್, ಆಲ್ವಿನ್ ಡಿಸೋಜ, ಗೋವರ್ಧನ್ ಸುರತ್ಕಲ್, ಗೀತಾ ಅತ್ತಾವರ, ಜೇಮ್ಸ್ ಶಿವಭಾಗ್, ವಹಾಬ್ ಕುದ್ರೋಳಿ, ಶಬೀರ್ ಸಿದ್ದಕಟ್ಟೆ, ನೆಲ್ಸನ್ ಮೊಂತೆರೊ, ಪ್ರೇಮ್ ಬಳ್ಳಾಲ್ ಭಾಗ್, ಜಾರ್ಜ್, ಭಾಸ್ಕರ್ ರಾವ್, ಇಮ್ರಾನ್ ಎ.ಆರ್, ಹೈದರ್ ಬೋಳಾರ್, ಫಾರೂಕ್ ಬಯಾಬೆ, ಸಮರ್ಥ್ ಭಟ್ ಮತ್ತಿತರರು ಉಪಸ್ಥಿತರಿದ್ದರು.