ಸುರತ್ಕಲ್: ಎನ್‌ಐಟಿಕೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಮಂಗಳೂರು: ಸುರತ್ಕನ ಎನ್‌ಐಟಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಲಾಯಿತು.
ಮುಖ್ಯ ಅತಿಥಿಗಳಾಗಿ ಪಣಂಬೂರಿನ ಪೊಲೀಸ್ ಇನ್ಸ್‌ಪೆಕ್ಟರ್ ಮುಹಮ್ಮದ್ ಸಲೀಂ ಅಬ್ಬಾಸ್ , ಗೌರವ ಅತಿಥಿಗಳಾಗಿ ಮಣಿಪಾಲದ ಎಂಎಎಚ್‌ಇ ಟಿ.ಎ. ಪೈ ಮ್ಯಾನೇಜ್‌ಮೆಂಟ್ ಇನ್‌ಸ್ಟಿಟ್ಯೂಟ್‌ನ ಪ್ರೊ. ನಂದನ್ ಪ್ರಭು , ಎನ್‌ಐಟಿಕೆ ನಿರ್ದೇಶಕ ಪ್ರೊ. ಬಿ. ರವಿ ಮತ್ತು ಉಪ ನಿರ್ದೇಶಕ ಪ್ರೊ. ಸುಭಾಷ್ ಸಿ. ಯರಗಲ್ ಅವರು ಡಾ. ಅಂಬೇಡ್ಕರ್ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ಸ್ವಯಂಸೇವಕರ ಪ್ರಯತ್ನಗಳನ್ನು ಶ್ಲಾಘಿಸಿದರು ಮತ್ತು ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಶಾಲಾ ಮಕ್ಕಳು ಮತ್ತು ಎನ್‌ಐಟಿಕೆ ವಿದ್ಯಾರ್ಥಿಗಳು ಸೇರಿದಂತೆ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮತ್ತು ಅವರ ಕುಟುಂಬಗಳು ಉತ್ಸಾಹದಿಂದ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪ್ರಬಂಧ , ಚಿತ್ರಕಲಾ ಮತ್ತು ಕವಿತೆ ಸ್ಪರ್ಧೆಗಳು, ಸಂಗೀತ ಕುರ್ಚಿ, ,ಪುಸ್ತಕ ಪ್ರದರ್ಶನ, ತಜ್ಞರಿಂದ ಭಾಷಣ, ಚರ್ಚಾಗೋಷ್ಠಿ ,ಗಿಡ ನೆಡುವಿಕೆ ಮತ್ತು ಸಮುದಾಯ ಸಂಪರ್ಕ ಕಾರ್ಯಕ್ರಮವನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು.
20 ಎನ್‌ಐಟಿಕೆ ಸ್ವಯಂಸೇವಕರು ಕೆರಕಾಡು ಗ್ರಾಮಕ್ಕೆ ಭೇಟಿ ನೀಡಿದರು. ಅವರು 17 ಕುಟುಂಬಗಳು, ಸುಮಾರು 100 ಜನರನ್ನು ಭೇಟಿಯಾಗಿ ಅವರ ಯೋಗ ಕ್ಷೇಮ ವಿಚಾರಿಸಿ ಕಿಟ್‌ಗಳನ್ನು ವಿತರಿಸಿದರು.