ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಕೋರ್ಸ್: ಅರ್ಜಿ ಆಹ್ವಾನ

Update: 2025-04-15 21:27 IST
ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಕೋರ್ಸ್: ಅರ್ಜಿ ಆಹ್ವಾನ
  • whatsapp icon

ಮಂಗಳೂರು, ಎ.15: 2025-2026ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ನಗರದ ಬೊಂದೇಲ್‌ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ವಿವಿಧ ಕೋರ್ಸ್‌ಗಳಿಗೆ ಸೇರಲು ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೋಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್ ಆ್ಯಂಡ್‌ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‌ಫೋರ್‌ಮೇಶನ್ ಸೈನ್ಸ್ ಕೋರ್ಸ್‌ಗಳಿಗೆ ಸೇರಲು ಎಸ್‌ಎಸ್‌ಎಲ್‌ಸಿ/ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಅಥವಾ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನಗರದ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಪರ್ಕಿಸಿ, ನೇರವಾಗಿ ಅರ್ಜಿ ಸಲ್ಲಿಸಬಹುದು ಅಥವಾ ಕಛೇರಿಯ ದೂರವಾಣಿ ಸಂಖ್ಯೆ: 0824-2482334/ 9611320910 / 9844744845 ಸಂಪರ್ಕಿಸಲು ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News