ಶಿಶುಪಾಲನಾ ಕೇಂದ್ರ ಕಾರ್ಯಕರ್ತೆ - ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Update: 2025-04-16 19:56 IST
ಶಿಶುಪಾಲನಾ ಕೇಂದ್ರ ಕಾರ್ಯಕರ್ತೆ - ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
  • whatsapp icon

ಮಂಗಳೂರು, ಎ.16: ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದಿಂದ ನಡೆಸಲ್ಪಡುತ್ತಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರಕ್ಕೆ 1 ಕಾರ್ಯಕರ್ತೆ ಹಾಗೂ 2 ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದಿಂದ ನಡೆಸಲ್ಪಡುತ್ತಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರಕ್ಕೆ 20ರಿಂದ 40 ವರ್ಷದೊಳಗಿನ ಶಾಲಾ ಪೂರ್ವ ಶಿಕ್ಷಣ ತರಬೇತಿ ಹೊಂದಿರುವ ಮಹಿಳೆಯರಿಂದ ಶಿಶುಪಾಲನಾ ಕೇಂದ್ರದ ಶಿಕ್ಷಕಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಮಾಸಿಕ ಗೌರವಧನ ರೂ 10,000 ಹಾಗೂ 10ನೇ ತರಗತಿ ಪಾಸಾಗಿರುವ ಮಹಿಳೆಯರಿಂದ ಸಹಾಯಕಿಯ ಹುದ್ದೆಗೆ ಮಾಸಿಕ ರೂ 6000 ಗೌರವಧನದಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 28ಕೊನೆಯ ದಿನ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರ ದೂ. ಸಂ:-6361633162 ಸಂಪರ್ಕಿಸುವಂತೆ ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News