ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ದ.ಕ.ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮೊಂಬತ್ತಿ ಹಿಡಿದು ಪ್ರತಿಭಟನೆ

Update: 2025-04-23 22:08 IST
ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ದ.ಕ.ಜಿಲ್ಲಾ ಯುವ ಕಾಂಗ್ರೆಸ್‌ನಿಂದ ಮೊಂಬತ್ತಿ ಹಿಡಿದು ಪ್ರತಿಭಟನೆ
  • whatsapp icon

ಮಂಗಳೂರು : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಲಾಲ್‌ಬಾಗ್‌ನ ಮಹಾತ್ಮ ಗಾಂಧಿ ಪ್ರತಿಮೆಯ ಮುಂದೆ ಬುಧವಾರ ಮೊಂಬತ್ತಿ ಹಿಡಿದು ಪ್ರತಿಭಟಿಸಿ ಮೌನ ಪ್ರಾರ್ಥನೆ ಮಾಡಲಾಯಿತು.

ಈ ಸಂದರ್ಭ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಮಾತನಾಡಿ ಈ ದೇಶಕ್ಕೆ ಮಾರಕವಾಗು ವಂತಹ ಕೃತ್ಯ ಯಾರೇ ಮಾಡಿದರೂ ಅವರನ್ನು ಎಲ್ಲರೂ ಒಗ್ಗೂಡಿ ಹಿಮ್ಮಟ್ಟಿಸುವ ಕೆಲಸ ಆಗಬೇಕಿದೆ ಎಂದರು.

ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಮೇಯರ್ ಕೆ. ಅಶ್ರಫ್ ಮಾತನಾಡಿದರು. ಯುವ ಕಾಂಗ್ರೆಸ್ ಜಿಲ್ಲಾ ಪದಾಧಿಕಾರಿಗಳಾದ ದೀಕ್ಷಿತ್ ಅತ್ತಾವರ್, ಬಶೀರ್ ಕಣ್ಣೂರ್, ಸಪನಿತ್ ಡೇಸಾ, ಪವನ್ ಸಾಲ್ಯಾನ್, ವಿಶಾಲ್ ಪೂಜಾರಿ, ಕಾಂಗ್ರೆಸ್ ಮುಖಂಡರಾದ ಸುಹೈಲ್ ಕಂದಕ್, ರಮಾನಂದ ಪೂಜಾರಿ, ನಝೀರ್ ಬಜಾಲ್, ಪೃತ್ವಿ ಪೂಜಾರಿ, ವೆಲ್ವಿನ್, ಜಾಕ್ಸನ್ ಮೂಡುಬಿದಿರೆ, ಕ್ರಿಸ್ತನ್ ಮೆನೆಸೆಸ್, ವಿನಯ್ ಕುಮಾರ್ ಸಿಂಧ್ಯ, ಪ್ರಜ್ವಲ್ ಶೆಟ್ಟಿ, ಮುಹಮ್ಮದ್ ಇಶಾಮ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News