ನವೋದಯ ರಜತ ಸಂಭ್ರಮ: ಸಿಎಂಗೆ ಆಮಂತ್ರಣ

Update: 2025-04-24 22:15 IST
ನವೋದಯ ರಜತ ಸಂಭ್ರಮ: ಸಿಎಂಗೆ ಆಮಂತ್ರಣ
  • whatsapp icon

ಮಂಗಳೂರು: ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ) ಮಂಗಳೂರು ಪ್ರವರ್ತಿಸಿದ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ -2025 ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಫಿಂಚ್ ಸಿಟಿಯಲ್ಲಿ ಮೇ 10ರಂದು ನಡೆಯಲಿದ್ದು, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭವನ್ನು ಉದ್ಘಾಟಿಸಲಿರುವರು.

ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಸಂಸ್ಥಾಪಕರು ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರು ರಜತ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನಲ್ಲಿ ಅವರ ನಿವಾಸದಲ್ಲಿ ನೀಡಿ ಸಮಾರಂಭಕ್ಕೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಐವನ್ ಡಿ ಸೋಜ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News