ಮಂಗಳೂರು: ಪಹಾಲ್ಗಾಮ್ ದಾಳಿ ಖಂಡಿಸಿ ಡಿವೈಎಫ್‌ಐ ಪ್ರತಿಭಟನೆ
Update: 2025-04-25 21:09 IST

ಮಂಗಳೂರು, ಎ.25: ಜಮ್ಮು ಕಾಶ್ಮೀರದ ಪಹಾಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಮೊನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ಭದ್ರತಾ ವೈಫಲ್ಯ ವನ್ನು ವಿರೋಧಿಸಿ ಹಾಗೂ ನರೇಂದ್ರ ಮೋದಿ ಮತ್ತು ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧದ ಮುಂದೆ ಶುಕ್ರವಾರ ಪ್ರತಿಭಟನೆ ನಡೆಯಿತು.
ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿದರು. ಸಂಘಟನೆಯ ಜಿಲ್ಲಾ ಮುಖಂಡರಾದ ರಿಜ್ವಾನ್ ಹರೇಕಳ, ನವೀನ್ ಕೊಂಚಾಡಿ, ಜಗದೀಶ್ ಬಜಾಲ್, ತಯ್ಯೂಬ್ ಬೆಂಗರೆ, ಪ್ರಮೀಳಾ ಶಕ್ತಿನಗರ, ಮಾಧುರಿ ಬೋಳಾರ, ಶ್ರೀನಾಥ್ ಕಾಟಿಪಳ್ಳ, ನಿತಿನ್ ಕುತ್ತಾರ್, ಸುನೀಲ್ ತೇವುಲ, ಯೋಗೀಶ್ ಜಪ್ಪಿನಮೊಗರು, ಯೋಗಿತಾ ಮತ್ತಿತರರು ಪಾಲ್ಗೊಂಡಿದ್ದರು.