ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ: ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಮೊಂಬತ್ತಿ ಪ್ರದರ್ಶಿಸಿ ಶ್ರದ್ಧಾಂಜಲಿ ಸಭೆ
Update: 2025-04-25 21:11 IST

ಮಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದ ಕರು ನಡೆಸಿದ ದಾಳಿಯನ್ನು ಖಂಡಿಸಿ ಮತ್ತು ಹುತಾತ್ಮರ ಗೌರವಾರ್ಥ ದ.ಕ.ಜಿಲ್ಲಾ ಕಾಂಗ್ರೆಸ್ ಮತ್ತು ಅಲ್ಪಸಂಖ್ಯಾತರ ಘಟಕದ ವತಿಯಿಂದ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶುಕ್ರವಾರ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಈ ಸಂದರ್ಭ ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಹರೀಶ್ ಕುಮಾರ್, ಜೆ. ಆರ್.ಲೋಬೋ, ಮಾಜಿ ಮೇಯರ್‌ಗಳಾದ ಕೆ. ಅಶ್ರಫ್, ಕೆ. ಶಶಿಧರ ಹೆಗ್ಡೆ, ಪಕ್ಷದ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಪದ್ಮರಾಜ್, ಶಾಲೆಟ್ ಪಿಂಟೋ, ಯು.ಟಿ.ಫರ್ಝಾನಾ, ರವೂಫ್ ಬಜಾಲ್, ಅಬ್ಬಾಸ್ ಅಲಿ ಬೋಳಂತೂರು, ಟಿ.ಕೆ.ಸುಧೀರ್, ಅಪ್ಪಿ ಮತ್ತಿತರರು ಉಪಸ್ಥಿತರಿದ್ದರು.