ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪ್ರಧಾನಿ, ರೈಲ್ವೆ ಸಚಿವರಿಗೆ ಪದ್ಮರಾಜ್ ಪೂಜಾರಿ ಆಗ್ರಹ

Update: 2025-04-28 20:54 IST
ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದಂತೆ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪ್ರಧಾನಿ, ರೈಲ್ವೆ ಸಚಿವರಿಗೆ ಪದ್ಮರಾಜ್ ಪೂಜಾರಿ ಆಗ್ರಹ

ಪದ್ಮರಾಜ್ ಪೂಜಾರಿ

  • whatsapp icon

ಮಂಗಳೂರು: ಪರೀಕ್ಷಾರ್ಥಿಗಳಿಗೆ ಯಾವುದೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯಾಗದ ರೀತಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ರೈಲ್ವೇ ಸಚಿವ ಸೋಮಣ್ಣ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ ಆರ್ ಪೂಜಾರಿ ಆಗ್ರಹಿಸಿದ್ದಾರೆ.

ಭಾರತ ದೇಶ ಹಲವು ಸಂಸ್ಕೃತಿಯನ್ನು ಹೊಂದಿರುವ ದೇಶ. ಇಲ್ಲಿನ ಸನಾತನ ಸಂಸ್ಕೃತಿಗೆ ತನ್ನದೇ ಆದ ಮಹತ್ವವೂ ಇದೆ. ಇಲ್ಲಿ ಮಾಂಗಲ್ಯಕ್ಕೂ ಅದರದ್ದೇ ಆದ ಪಾವಿತ್ರೃತೆ ಇದೆ. ಪ್ರತಿಯೊಂದು ಆಚರಣೆಯೂ ಇಲ್ಲಿನ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಅದಾಗ್ಯೂ ಕೇಂದ್ರ ಸರಕಾರದ ಅಧೀನದಲ್ಲಿರುವ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಯ ವೇಳೆ ಯಾವುದೇ ಧಾರ್ಮಿಕ ಸಂಕೇತಗಳನ್ನು ಅಭ್ಯರ್ಥಿಗಳು ಹೊಂದಿರಬಾರದು. ಪರೀಕ್ಷೆ ಬರೆಯುವ ಮೊದಲು ಹಿಂದೂಗಳು ಅವರ ಧಾರ್ಮಿಕ ಚಿಹ್ನೆಗಳಾದ ಮಂಗಳ ಸೂತ್ರ, ಕಾಲುಂಗುರ, ತಿಲಕ, ಜನಿವಾರ, ಕೈಬಳೆ ಇನ್ನಿತರ ಎಲ್ಲವುಗಳನ್ನೂ ತೆಗೆದಿಟ್ಟು ಪರೀಕ್ಷಾ ಕೊಠಡಿ ಪ್ರವೇಶ ಮಾಡುವಂತೆ ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವುದು ಎಷ್ಟು ಸರಿ? ಎಂದು ಪದ್ಮರಾಜ ಆರ್ ಪೂಜಾರಿ ಪ್ರಶ್ನಿಸಿದ್ದಾರೆ.

ಮುತ್ತೈದೆ ಹೆಣ್ಣುಮಗಳು ತಾಳಿ ಸರ ಕಳಚುವಂತೆ, ಸಿಂಧೂರ ಅಳಿಸುವಂತೆ ಮಾಡುವುದು, ಪವಿತ್ರ ಜನಿವಾರವನ್ನು ಕಿತ್ತುಹಾಕುವಂತೆ ಹೇಳುವುದು ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತರುವಂತಾ ಗಿದೆ ಎಂದು ಪದ್ಮರಾಜ್ ಆರ್ ಪೂಜಾರಿ ಅವರು ಪ್ರಧಾನಿ ಮತ್ತು ರೈಲ್ವೇ ಸಚಿವರಿಗೆ ಕಳುಹಿಸಿರುವ ಪತ್ರದಲ್ಲಿ ತಿಳಿಸಿದ್ದಾರೆ.

ರೈಲ್ವೆ ನೇಮಕಾತಿ, ಯುಪಿಎಸ್‌ಸಿ ಹಾಗೂ ಕೇಂದ್ರ ಸರಕಾರದ ಅಧೀನದ ಇಲಾಖೆಗಳಿಂದ ನಡೆಸುವ ಪರೀಕ್ಷೆಯಲ್ಲಿ ಇಂತಹ ಆದೇಶವನ್ನು ಕೈಬಿಟ್ಟು ನಡೆಯಲಿರುವ ಪರೀಕ್ಷೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆಬಾರದ ರೀತಿಯಲ್ಲಿ ಪರೀಕ್ಷಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟು ಸನಾತನ ಹಿಂದೂ ಧರ್ಮದ ಆಚಾರ-ವಿಚಾರಗಳನ್ನು ತೊಡಕಾಗದಂತೆ ಎಚ್ಚರವಹಿಸಬೇಕು ಎಂದು ಪದ್ಮರಾಜ್ ಆರ್.ಪೂಜಾರಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News