ಮಂಗಳೂರು| ಯುವಕನ ಕೊಲೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸ್ಪೀಕರ್‌ ಯುಟಿ ಖಾದರ್‌ ಸೂಚನೆ

Update: 2025-04-28 23:40 IST
ಮಂಗಳೂರು| ಯುವಕನ ಕೊಲೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸ್ಪೀಕರ್‌ ಯುಟಿ ಖಾದರ್‌ ಸೂಚನೆ

ಯುಟಿ ಖಾದರ್‌

  • whatsapp icon

ಮಂಗಳೂರು: ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ನಡೆದ ಉತ್ತರ ಭಾರತ ಮೂಲದ ಯುವಕನ ಕೊಲೆ ಪ್ರಕರಣವನ್ನು ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭಾಧ್ಯಕ್ಷ ಯು.ಟಿ.ಖಾದರ್ ಅವರು ಸೂಚನೆ ನೀಡಿದ್ದಾರೆ.

ಮಂಗಳೂರು ನಗರ ಹೊರವಲಯದ ಕುಡುಪು ಬಳಿ ರವಿವಾರ ಸಂಜೆ ಉತ್ತರ ಭಾರತದ ಮೂಲದ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ಘಟನೆ ನಡೆದಿದ್ದು, ಸ್ಪೀಕರ್‌ ಯು.ಟಿ.ಖಾದರ್ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

ಈ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ಬಳಿ ಮಾಹಿತಿ ಪಡೆದ ಸಭಾಧ್ಯಕ್ಷ ಯು.ಟಿ.ಖಾದರ್ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News