ಪಾಂಡೇಶ್ವರ: ಬೇಕರಿಯಲ್ಲಿ ಬೆಂಕಿ ಅವಘಡ

Update: 2025-04-29 23:14 IST
ಪಾಂಡೇಶ್ವರ: ಬೇಕರಿಯಲ್ಲಿ ಬೆಂಕಿ ಅವಘಡ
  • whatsapp icon

ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಬೇಕರಿಯೊಂದರಲ್ಲಿ ಮಂಗಳವಾರ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ ಎಂದು ತಿಳಿದು ಬಂದಿದೆ.

ಈ ಬೇಕರಿಯ ಸ್ವಿಚ್‌ಬೋರ್ಡ್‌ನಲ್ಲಿ ಮಂಗಳವಾರ ಬೆಳಗ್ಗೆ ಸುಮಾರು 6..30ರ ವೇಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರಿಂದ ತಿಂಡಿ ತಿನಿಸುಗಳು ಮತ್ತು ಕಟ್ಟಡಕ್ಕೆ ಭಾಗಶಃ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News