ರಾಜೇಂದ್ರಕುಮಾರ್‌ಗೆ ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಿಂದ ಅಭಿನಂದನೆ

ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೈನುಗಾರರ ಪ್ರತಿಷ್ಠಿತ ಸಹಕಾರಿ ಸಂಸ್ಥೆ ಎಂದು ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆಯಲ್ಲಿ ಆಯ್ಕೆಗೊಂಡ ನೂತನ ನಿರ್ದೇಶಕರುಗಳು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಯಲ್ಲಿ ಡಾ. ಎಂ. ಎನ್. ರಾಜೇಂದ್ರಕುಮಾರ್ ನೇತೃತ್ವದ ಹೈನುಗಾರರ ಬಳಗಕ್ಕೆ ಭರ್ಜರಿ ಗೆಲುವು ಲಭಿಸಿತ್ತು ಆಹಿನ್ನಲೆಯಲ್ಲಿ ಸೋಮವಾರ ಚುನಾಯಿತ ನಿರ್ದೇಶಕರಗಳು ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರನ್ನು ಎಸ್‌ಸಿಡಿಸಿಸಿ ಬ್ಯಾಂಕ್‌ನಲ್ಲಿ ಭೇಟಿಯಾಗಿ ಅಭಿನಂದಿಸಿದರು.
ರಾಜೇಂದ್ರ ಕುಮಾರ್ ಬಳಗದ ದೇವಿಪ್ರಸಾದ್ ಶೆಟ್ಟಿ, ರವಿರಾಜ ಹೆಗ್ಡೆ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉದಯ ಎಸ್. ಕೋಟ್ಯಾನ್, ಸುಧಾಕರ್ ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಕೆ. ಶಿವಮೂರ್ತಿ, ಸುಚರಿತ ಶೆಟ್ಟಿ, ನಂದರಾಮ್ ರೈ, ಎಸ್. ಬಿ. ಜಯರಾಮ ರೈ, ಚಂದ್ರಶೇಖರ ರಾವ್, ಎಚ್. ಪ್ರಭಾಕರ್, ಮಮತಾ ಆರ್. ಶೆಟ್ಟಿ ಇವರು ರಾಜೇಂದ್ರ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನೂತನ ನಿರ್ದೇಶಕರನ್ನು ಈ ಸಂದರ್ಭ ಅಭಿನಂದಿಸಿದರು.