ನ.1: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Update: 2023-10-31 16:29 GMT
ನ.1: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
  • whatsapp icon

ಮಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.1ರಂದು ದ.ಕ. ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಬೆಳಗ್ಗೆ 8:15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವರು. 9ಕ್ಕೆ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಕನ್ನಡ ದ್ವಜಾರೋಹಣ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಸುವರು. 12ಕ್ಕೆ ನಗರದ ಲೇಡಿಹಿಲ್‌ನಲ್ಲಿರುವ ಪತ್ರಿಕಾ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘ, ಮಂಗಳೂರು ಪ್ರೆಸ್‌ಕ್ಲಬ್ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಭಾಗಿತ್ವದಲ್ಲಿ 50ನೇ ಉಚಿತ ವೈದ್ಯಕೀಯ ತಪಾಸಣೆಯ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ಹಾಗೂ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2.30ಕ್ಕೆ ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳೂರು ಸ್ಮಾರ್ಟ್ ಸಿಟಿ ಪ್ರಗತಿ, ಅಂತರಾಷ್ಟ್ರೀಯ ಈಜುಕೊಳ, ಕರಾವಳಿ ಉತ್ಸವದ ಬಗ್ಗೆ ಪೂರ್ವಭಾವಿ ಸಭೆ ನಡೆಸುವರು. ಸಂಜೆ 4:30ಕ್ಕೆ ನಗರದ ಪುರಭವನದಲ್ಲಿ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಮಂಗಳೂರು ಸಿಟಿ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ಲೆಟಸ್ ವಾಕ್ ಟುಗೆದರ್ ಫಾರ್ ಡ್ರಗ್ ಫ್ರೀ ಫ್ಯೂಚರ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6:40ಕ್ಕೆ ಮಂಗಳೂರಿ ನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News