ನ.11: ಪೊಲೀಸ್ ಫೋನ್ ಇನ್ ಕಾರ್ಯಕ್ರಮ
Update: 2023-11-08 14:29 GMT
ಮಂಗಳೂರು, ನ.8: ನಗರ ಪೊಲೀಸ್ ಇಲಾಖೆಯ ವತಿಯಿಂದ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಲುವಾಗಿ ನ.11ರಂದು ಬೆಳಗ್ಗೆ 10ರಿಂದ 11ರವರೆಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಫೋನ್‌ಇನ್ ಕಾರ್ಯಕ್ರಮವನ್ನು ನಡೆಯಲಿದೆ.
ಸಾರ್ವಜನಿಕರು ಕುಂದು ಕೊರತೆಗಳನ್ನು ಫೋನ್ (ದೂ.ಸಂ: 0824-2220801/2220830) ಮೂಲಕ ನೇರವಾಗಿ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿ ಪರಿಹಾರ ಕಂಡು ಕೊಳ್ಳಬಹುದು.
*ಫೋನ್ ಇನ್ ಕಾರ್ಯಕ್ರಮದ ಬಳಿಕ 11ರಿಂದ 12ರವರೆಗೆ ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿ ಕರ ಕುಂದು ಕೊರತೆಗಳ ಸಭೆಯನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಸಾರ್ವಜನಿಕರು ಕುಂದು ಕೊರತೆಗಳನ್ನು ಸಭೆಯಲ್ಲಿ ತಿಳಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.