ನ.16-18: ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಮಂಗಳೂರು,ನ.13: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನ.16ರಿಂದ 18ರವರೆಗೆ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.
ನ.16ರ ರಾತ್ರಿ 9:25ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಅಲ್ಲಿಂದ ರಾತ್ರಿ 11ಕ್ಕೆ ಸುಳ್ಯಕ್ಕೆ ತೆರಳಿ ಅರಣ್ಯ ಇಲಾಖೆ ವಸತಿ ಗೃಹದಲ್ಲಿ ವಾಸ್ತವ್ಯ ಮಾಡುವರು.
ನ.17ರ ಬೆಳಗ್ಗೆ 10:30ಕ್ಕೆ ಸುಳ್ಯ ತಾಲೂಕಿನ ಕುಡಿಯುವ ನೀರಿನ ಯೋಜನೆಗೆ ಶಂಕು ಸ್ಥಾಪನೆ ಮಾಡುವರು. 11:35ಕ್ಕೆ ವೆಂಟೆಡ್ ಡ್ಯಾಮ್ ವೀಕ್ಷಣೆ ಮಾಡುವರು. ಮಧ್ಯಾಹ್ನ 12:30ಕ್ಕೆ ಬಾಳಿಲ ಆಶ್ರಮ ಶಾಲೆಯ ಹಾಸ್ಟೆಲ್ ಕಟ್ಟಡ ಉದ್ಘಾಟನೆ ಕಾರ್ಯಕ್ರಮ, ಮಧ್ಯಾಹ್ನ 1ಕ್ಕೆ ಸುಳ್ಯ ತಾಲೂಕು ಆಸ್ಪತ್ರೆಗೆ ಭೇಟಿ, ಅಪರಾಹ್ನ 3ಕ್ಕೆ ತಾಲೂಕು ಮಟ್ಟದ ಅಧಿಕಾರಿ ಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 6ಕ್ಕೆ ಚೆನ್ನಕೇಶವ ದೇವಸ್ಥಾನದ ಸಮೀಪವಿರುವ ಪ್ರಭು ಮೈದಾನದಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಎ ಗ್ರೇಡ್ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಮತ್ತು ರಾತ್ರಿ 8:30ಕ್ಕೆ ಬಜ್ಪೆಲೆಜೆನ್ಸ್ ಕ್ರಿಕೆಟ್ ಪಂದ್ಯಾಟ ಉದ್ಘಾಟಿಸುವರು. 10:30ಕ್ಕೆ ಕದ್ರಿಯ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡುವರು.
ನ.18ರ ಬೆಳಗ್ಗೆ 9:15ಕ್ಕೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. 10:30ಕ್ಕೆ ಉರ್ವ ಕ್ರಿಕೆಟ್ ಮೈದಾನದಲ್ಲಿ ನಡೆಯುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಂಡಿರುವ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12ಕ್ಕೆ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡುವರು ಮತ್ತು ವನ್ಯ ಪ್ರಾಣಿಗಳ ಆವರಣ ಗಳ ಉದ್ಘಾಟನೆ ಮಾಡುವರು. ಸಂಜೆ 6:40ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.