ಬಿಜೈ ಕಾಪಿಕಾಡ್ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಮಾಹಿತಿ ಕಾರ್ಯಕ್ರಮ

Update: 2024-09-21 17:35 GMT

ಮಂಗಳೂರು: ನಗರದ ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹದ ಅಂಗವಾಗಿ ಪೌಷ್ಠಿಕ ಆಹಾರದಲ್ಲಿ ಪೌಷ್ಟಿಕಾಂಶದ ಸಂರಕ್ಷಣೆ, ಪೌಷ್ಟಿಕ ಆಹಾರದ ತಯಾರಿಯ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ ಶನಿವಾರ ನಡೆಯಿತು.

ಸಮಾರಂಭವನ್ನು ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉದ್ಘಾಟಿಸಿ ಮಾತನಾಡುತ್ತಾ, ನಿರಂತರ ಚಟುವಟಿಕೆಯಿಂದ ಇರುವ ಬಿಜೈ ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯ ಕರ್ತೆಯ ಕಾಳಜಿ ಯಿಂದ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಕೇಂದ್ರ ಮಾದರಿಯಾಗಿದೆ ಎಂದು ಶುಭ ಹಾರೈಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಸಿಂಧು ರವರು ಮಾಹಿತಿ ನೀಡುತ್ತಾ, ಪೌಷ್ಠಿಕಾಂಶ ವನ್ನು ಉಳಿಸಿಕೊಂಡು ನಾವು ತಿನ್ನುವ ಆಹಾರದ ತಯಾರಿ ಹೇಗೆ ,ಗರ್ಭಿಣಿ ಮಹಿಳೆಯರಿಗೆ ಯಾವ ಆಹಾರ ಅಗತ್ಯವಿದೆ, ಸಣ್ಣ ಮಕ್ಕಳ ಬೆಳವಣಿಗೆಗೆ ಅಗತ್ಯ ವಾಗಿ ಬೇಕಾಗುವ ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು.

ಕೆಎಂಸಿ ಸಮುದಾಯ ಆರೋಗ್ಯ ವಿಭಾಗದ ಅಧಿಕಾರಿ ಶರಾವತಿಯವರು ಆಹಾರದ ಹಿತ ಮಿತ ಆರೋಗ್ಯಕರ ರೀತಿಯಲ್ಲಿ ಸೇವನೆ, ಶುಚಿತ್ವದ ಬಗ್ಗೆ ಮಾಹಿತಿ ನೀಡಿದರು.

ಸಮಾರಂಭದಲ್ಲಿ ಪೌಷ್ಠಿಕಾಂಶದ ಆಹಾರ, ಹಣ್ಣು, ತಿಂಡಿಗಳ ಪ್ರದರ್ಶನ ಮತ್ತು ಸಹಭೋಜನ, ವಿಶೇಷವಾಗಿ ಇಬ್ಬರು ಗರ್ಭಿಣಿ ಮಹಿಳೆಯರಿಗೆ ಪೋಷಕಾಂಶ ಭರಿತ ಆಹಾರ ಹಾಗೂ ಇತರ ವಸ್ತುಗಳನ್ನು ನೀಡಿ ಸೀಮಂತ ಕಾರ್ಯಕ್ರಮ. ಇಬ್ಬರು ಎಳೆಯ ಮಕ್ಕಳಿಗೆ ತುತ್ತು ತಿನಿಸುವ ವಿಶೇಷ ಕಾರ್ಯಕ್ರಮ ನಡೆಯಿತು. ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ನಂದಾ ಮಾತನಾಡುತ್ತಾ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಂಗನವಾಡಿಯ ಬಗ್ಗೆ ಹೆಚ್ಚಿನ ಕಾಳಜಿ ತೋರಿಸಿರುವ ಬಗ್ಗೆ ಮತ್ತು ಕೇಂದ್ರಕ್ಕೆ ಕುಡಿಯುವ ನೀರು,ಮಕ್ಕಳಿಗೆ ಸಮವಸ್ತ್ರ,ಇತರ ಸಾಮಾಗ್ರಿಗಳನ್ನು ಒದಗಿಸಿ ಸದಾ ಸಹಕಾರ ನೀಡುತ್ತಿರುವುದನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಶುಭ ಹಾರೈಸಿದರು.ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಸವಿತಾ ಬಿಜೈ ಕಾಪಿಕಾಡ್ ಹಿರಿಯಪ್ರಾಥಮಿಕ ಶಾಲೆಯ ಮುಖ್ಯೋಪಾ ಧ್ಯಾಯಿನಿ ಲೀನಾ, ಸಹಾಯಕಿ ಲಕ್ಷ್ಮಿ, ಆಶಾ ಕಾರ್ಯಕರ್ತೆ ಗಾಯತ್ರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News